Advertisement

Mangaluru Dasara; ನಾಳೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಭೇಟಿ

12:14 AM Oct 22, 2023 | Team Udayavani |

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾದಲ್ಲಿ ಅ. 23ರಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಭಾಗವಹಿಸಲಿದ್ದಾರೆ.

Advertisement

ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ನೇತೃತ್ವದಲ್ಲಿ ಅ. 24ರ ಸಂಜೆ 4ರಿಂದ ಶ್ರೀ ಶಾರದಾ ಮಾತೆಯ ಶೋಭಾಯಾತ್ರೆ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಭಾಗವಹಿಸಲಿದ್ದಾರೆ. ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್‌, ಮಂಗಳೂರು ಬಿಷಪ್‌ ರೈ| ರೆ| ಡಾ| ಪೀಟರ್‌ ಪೌವ್‌É ಸಲ್ಡಾನ್ಹಾ ಸಹಿತ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.

ಶೋಭಾಯಾತ್ರೆಯಲ್ಲಿ ಹುಲಿವೇಷ ಸೇರಿದಂತೆ ವಿಭಿನ್ನ ರೀತಿಯ ಸ್ತಬ್ಧಚಿತ್ರ, ನಾನಾ ದೇವಸ್ಥಾನಗಳು, ಸಂಘ ಸಂಸ್ಥೆಗಳ ಸುಮಾರು 80ಕ್ಕೂ ಅಧಿಕ ಸ್ತಬ್ಧಚಿತ್ರಗಳು ಗಮನ ಸೆಳೆಯಲಿವೆ. ಅದರಲ್ಲೂ ಸಾಮರಸ್ಯದ ಸಂಕೇತವಾಗಿ ಕ್ರೈಸ್ತರಿಂದ ಸ್ತಬ್ಧಚಿತ್ರ, ಮಂಗಳೂರು ಬೀದಿಬದಿ ವ್ಯಾಪಾರಸ್ಥರ ಸಂಘದಿಂದ ಮಂಗಳೂರು ಅಭಿವೃದ್ಧಿಯ ಹಿಂದೆ ಹಿಂದೂ-ಮುಸ್ಲಿಂ-ಕ್ರೈಸ್ತ ಸಮುದಾಯದ ಸಹಬಾಳ್ವೆಯ ಸ್ತಬ್ಧಚಿತ್ರ ಗಮನಸೆಳೆಯಲಿದೆ.

ಈ ಬಾರಿ ನಾಸಿಕ್‌, ಡಿಜೆಗೆ ಅವಕಾಶ
ಮಂಗಳೂರು ದಸರಾ ಮಹೋತ್ಸವ ಮೆರವಣಿಗೆಗೆ ಸಂಘ-ಸಂಸ್ಥೆಗಳು ಈಗಾಗಲೇ ನಾಸಿಕ್‌, ಡಿಜೆಗೆ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಸಂಬಂಧಪಟ್ಟವರು ಮನವಿ ಮಾಡಿದ ಕಾರಣ ಕೊನೇ ಕ್ಷಣದಲ್ಲಿ ನಾಸಿಕ್‌, ಡಿಜೆಗೆ ಕೆಲವೊಂದು ಷರತ್ತು ಮೂಲಕ ಅವಕಾಶ ನೀಡಲು ನಿರ್ಧರಿಸಲಾಗಿದೆ. ಆದರೆ ಮುಂದಿನ ವರ್ಷದಿಂದ ಅವಕಾಶ ನೀಡಲಾಗುವುದಿಲ್ಲ ಎಂದು ದೇವಸ್ಥಾನದ ಮೂಲಗಳು ತಿಳಿಸಿದೆ.

2 ಲಕ್ಷಕ್ಕೂ ಅಧಿಕ ಮಂದಿ ಭಾಗಿ ಸಾಧ್ಯತೆ
ಅ. 24ರಂದು ನಡೆಯುವ ಶ್ರೀ ಶಾರದಾ ಮಾತೆಯ ಶೋಭಾಯಾತ್ರೆಯಲ್ಲಿ ಊರ-ಪರವೂರು ಸುಮಾರು 2 ಲಕ್ಷಕ್ಕೂ ಅಧಿಕ ಮಂದಿ ಭಾಗಿಯಾಗುವ ನಿರೀಕ್ಷೆ ಇದೆ. ಸಂಜೆ 4ಕ್ಕೆ ಶೋಭಾಯಾತ್ರೆ ಆರಂಭವಾಗಲಿದ್ದು, ವಿವಿಧ ಬೀದಿಗಳಲ್ಲಿ ಸಾಗಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next