Advertisement

‘Mangaluru Dasara’ ಸಂಪನ್ನ ; 9 ಕಿ.ಮೀ. ದೂರ ಸಾಗಿದ ಶೋಭಾಯಾತ್ರೆ

01:08 AM Oct 15, 2024 | Team Udayavani |

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ರವಿವಾರ ರಾತ್ರಿ ಜರಗಿದ “ಮಂಗಳೂರು ದಸರಾ’ ಶೋಭಾಯಾತ್ರೆ ಸೋಮವಾರ ಬೆಳಗ್ಗೆ ಸಂಪನ್ನಗೊಂಡಿತು.
ರವಿವಾರ ಸಂಜೆ ಕುದ್ರೋಳಿಯಿಂದ ಶ್ರೀ ಶಾರದೆ ಶೋಭಾಯಾತ್ರೆಯಲ್ಲಿ ಹೊರಟಿದ್ದು, ಸೋಮವಾರ ಮುಂಜಾನೆ ಸುಮಾರು 3.20ಕ್ಕೆ ಕುದ್ರೋಳಿಗೆ ಆಗಮಿಸಿತು. ಬೆಳಗ್ಗೆ 7.15ಕ್ಕೆ ಜಲಸ್ತಂಭನವಾಯಿತು. ಈ ಮೂಲಕ ಮಂಗಳೂರು ದಸರಾ ಮೆರವಣಿಗೆ ಸಮಾಪನಗೊಂಡಿತು.

Advertisement

ಶೋಭಾಯಾತ್ರೆಯುದ್ದಕ್ಕೂ ಲಕ್ಷಾಂತರ ಮಂದಿ ಭಾಗವಹಿಸಿದ್ದರು. ಶ್ರೀ ಕ್ಷೇತ್ರ ಕುದ್ರೋಳಿಯಿಂದ ಹೊರಟ ದಸರಾ ಮೆರವಣಿಗೆ ಮಣ್ಣಗುಡ್ಡ ಮಾರ್ಗವಾಗಿ ಲೇಡಿಹಿಲ್‌ ನಾರಾಯಣ ಗುರು ಸರ್ಕಲ್‌, ಲಾಲ್‌ಬಾಗ್‌, ಬಲ್ಲಾಳ್‌ಬಾಗ್‌, ಪಿವಿಎಸ್‌ ವೃತ್ತ, ಕೆ.ಎಸ್‌. ರಾವ್‌ ರಸ್ತೆ, ಹಂಪನಕಟ್ಟೆ, ವಿ.ವಿ. ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ ಗಣಪತಿ ಹೈಸ್ಕೂಲ್‌ ಮಾರ್ಗವಾಗಿ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಕಾರ್‌ಸ್ಟ್ರೀಟ್‌, ಅಳಕೆ ಮೂಲಕ ಮತ್ತೆ ಶ್ರೀ ಕ್ಷೇತ್ರ ತಲುಪಿತು. ನಗರದ 9 ಕಿ.ಮೀ. ವ್ಯಾಪ್ತಿಯಲ್ಲಿ ಮೆರವಣಿಗೆ ಸಾಗಿತು.

ಕುದ್ರೋಳಿ ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಮಾರ್ಗದರ್ಶನದಲ್ಲಿ ಜರಗಿದ ಭವ್ಯ ಶೋಭಾಯಾತ್ರೆಯನ್ನು ಲಕ್ಷಾಂತರ ಜನರು ಕಣ್ತುಂಬಿಕೊಂಡರು. ನವ ದುರ್ಗೆಯರ ಸಹಿತ ಶಾರದಾ ಮಾತೆಯ ವಿಗ್ರಹ ಸಾಗಿದ ಬಳಿಕ ಸ್ತಬ್ಧಚಿತ್ರಗಳು ತೆರಳಿದವು. ಹುಲಿವೇಷ ಸಹಿತ ವಿಭಿನ್ನ ರೀತಿಯ ಸ್ತಬ್ಧಚಿತ್ರ, ವಿವಿಧ ದೇವಸ್ಥಾನಗಳು, ಸಂಘ ಸಂಸ್ಥೆಗಳ 70ಕ್ಕೂ ಅಧಿಕ ಸ್ತಬ್ಧಚಿತ್ರಗಳು ಗಮನ ಸೆಳೆದವು. ವಿವಿಧ ಕಲಾತಂಡಗಳ ಪ್ರದರ್ಶನ ಆಕರ್ಷಣೀಯವಾಗಿತ್ತು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next