Advertisement

ಮಂಗಳೂರು ದಸರಾ ಮಹೋತ್ಸವ ಉದ್ಘಾಟನೆ

09:24 AM Oct 07, 2019 | Naveen |

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ವತಿಯಿಂದ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವಕ್ಕೆ ರವಿವಾರದಂದು ಚಾಲನೆ ದೊರೆತಿದ್ದು, ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ದಸರಾ ಮಹೋತ್ಸವವನ್ನು ಉದ್ಘಾಟಿಸಿದರು.

Advertisement

ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ ರಾಜ್ಯದಲ್ಲಿ ಸುಮಾರು 34,500 ದೇವಾಲಯಗಳಿವೆ. ಇವುಗಳನ್ನೆಲ್ಲ ಸಮೀಕ್ಷೆ ಮಾಡಿದಾಗ ರಾಜ್ಯದಲ್ಲಿಯೇ ಅತ್ಯಂತ ಯೋಜನಾ ಬದ್ಧವಾದ, ಮುಂದಿನ ಜನಾಂಗಕ್ಕೆ ದಾರಿ ಬೆಳಕಾಗಬಲ್ಲ ಹಾಗೂ ಭಾವುಕನೊಬ್ಬ ಪ್ರೀತಿ ಹೆಮ್ಮೆಯಿಂದ ಆರಾಧನೆ ಮಾಡಬಹುದಾದ ಶ್ರೇಷ್ಠ ದೇವಾಲಯ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನವಾಗಿದೆ ಎಂದರು.

ಮಂಗಳೂರು ದಸರಾ ಮಹೋತ್ಸವ ಭವ್ಯ ಶೋಭಾಯಾತ್ರೆ ಅ. 8ರಂದು ಸಂಜೆ 4ರಿಂದ ನಡೆಯಲಿದೆ. ಶ್ರೀ ಕ್ಷೇತ್ರದಿಂದ ಹೊರಟ ಶೋಭಾಯಾತ್ರೆಯು ಕಂಬ್ಳಾ ರಸ್ತೆ, ಮಣ್ಣಗುಡ್ಡ ಮಾರ್ಗವಾಗಿ ಲೇಡಿಹಿಲ್ ಸರ್ಕಲ್, ಲಾಲ್‌ಭಾಗ್, ಬಲ್ಲಾಲ್ ಬಾಗ್, ಪಿವಿಎಸ್, ನವಭಾರತ್ ಸರ್ಕಲ್, ಕೆ.ಎಸ್. ರಾವ್ ರಸ್ತೆ, ಹಂಪನಕಟ್ಟೆ, ವಿ.ವಿ. ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ, ಗಣಪತಿ ಹೈಸ್ಕೂಲ್ ಮಾರ್ಗವಾಗಿ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ರಥಬೀದಿ, ಚಿತ್ರಾ ಟಾಕೀಸು, ಅಳಕೆಯಾಗಿ ಶ್ರೀ ಕ್ಷೇತ್ರಕ್ಕೆ ಬರಲಿದೆ.

Advertisement

Udayavani is now on Telegram. Click here to join our channel and stay updated with the latest news.

Next