Advertisement

Mangaluru: ಆತ್ಮಹತ್ಯೆಗೆ ಯತ್ನಿಸಿದ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ

01:00 PM Apr 02, 2024 | Team Udayavani |

ಮಂಗಳೂರು: ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಏ. 2ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ನಡೆದಿದೆ.

Advertisement

ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿಯನ್ನು ಶ್ರೀಧರ್ ಹೆಗಡೆ ಎನ್ನಲಾಗಿದ್ದು. ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ದತಿ ತಂಡದ ಸದಸ್ಯರಾಗಿದ್ದರು.

2019ರಿಂದ ಬೆಳ್ತಂಗಡಿಯ ಕಡಿರು ಉದ್ಯಾವರ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಇವರ ಜಾಗಕ್ಕೆ ಮತ್ತೊಬ್ಬರು ವರ್ಗಾವಣೆಯಾದ ಹಿನ್ನಲೆಯಲ್ಲಿ ಕಳೆದ ಫೆಬ್ರವರಿ ಹಾಗೂ ಮಾರ್ಚ್ ನಿಂದ ಸ್ಥಳ ನಿರೀಕ್ಷಣೆಯಲ್ಲಿದ್ದರು.

ವೈಯಕ್ತಿಕ ಕಾರಣಗಳಿಂದ ಇಂದು ಆತ್ಮಹತ್ಯೆಗೆ ಯತ್ನಿಸಿದ ಇವರನ್ನು ಕೂಡಲೇ ವೆನ್ ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ಚಿಕಿತ್ಸೆ ನೀಡಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದು ಹೆಚ್ಚಿನ ನಿಗಾವಣಿಗಾಗಿ ಇವರನ್ನು ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ ಎಂದು ಹೇಳಲಾಗಿದೆ.

ಇವರ ಪತ್ನಿ ಜಯಂತಿ ಸ್ಟಾಫ್ ನಸ್೯ ಆಗಿ ಬೆಳ್ತಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

Advertisement

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಧಿಕಾರಿ ಡಾ.ಆನಂದ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ, ಜಿಲ್ಲಾ ಪಂಚಾಯತ್ ನ ಲೆಕ್ಕಾಧೀಕ್ಷ ಬಾಲು ಡಿ.ಎಂ. ಸೇರಿದಂತೆ ಹಲವು ಅಧಿಕಾರಿಗಳು, ಸಿಬ್ಬಂದಿ ಆಸ್ಪತ್ರೆಯಲ್ಲಿದ್ದು, ಅವರ ಚಿಕಿತ್ಸೆಗೆ ನೆರವಾಗಿದ್ದಾರೆ.

ಇದನ್ನೂ ಓದಿ: ಮುಂದಿನ ಬಾರಿ ಸ್ಪರ್ಧೆ ಮಾಡಲ್ಲ… ನಿವೃತ್ತಿಗೆ ತೀರ್ಮಾನ ಮಾಡಿದ್ದೇನೆ: ಮೈಸೂರಿನಲ್ಲಿ ಸಿಎಂ

Advertisement

Udayavani is now on Telegram. Click here to join our channel and stay updated with the latest news.

Next