Advertisement

ಪಚ್ಚನಾಡಿ,‌ಮಂದಾರ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

07:46 PM Sep 11, 2019 | Team Udayavani |

ಮಂಗಳೂರು: ಇತ್ತೀಚಿಗೆ ತ್ಯಾಜ್ಯ ನೆಲಭರ್ತಿ ಪ್ರದೇಶದಲ್ಲಿ ಕುಸಿತ ಉಂಟಾದ ಪಚ್ಚನಾಡಿ ಮತ್ತು ಮಂದಾರ ಪ್ರದೇಶಗಳಿಗೆ ಬುಧವಾರ ಜಿಲ್ಲಾಧಿಕಾರಿ ಸಿಂಧೂ‌ ರೂಪೇಶ್ ಭೇಟಿ ನೀಡಿದರು.

Advertisement

ಮೊದಲು ಪಚ್ಚನಾಡಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಬಳಿಕ ಮಂದಾರಕ್ಕೆ ಭೇಟಿ ನೀಡಿದರು. ನಂತರ ಮಂದಾರ ಸಂತ್ರಸ್ತರಿಗೆ ತಾತ್ಕಾಲಿಕ ಆಶ್ರಯ ನೀಡಿರುವ ಕುಲಶೇಖರ ಹೌಸಿಂಗ್ ಬೋಡ್೯ಗೆ ಭೇಟಿ ನೀಡಿ, ಸಂತ್ರಸ್ತರ ಅಹವಾಲು ಆಲಿಸಿದರು.

ಸಂತ್ರಸ್ತರಿಗೆ ಜಿಲ್ಲಾಡಳಿತ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದರು. ಬಳಿಕ ಅಧಿಕಾರಿಗಳೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿಗಳು, ಇಲ್ಲಿನ ಸಮಸ್ಯೆ ಬಗ್ಗೆ ಎರಡು ರೀತಿಯ ಯೋಜನೆ ಮಾಡಬೇಕು. ಪಚ್ಚನಾಡಿಯಲ್ಲಿ ಹಾಲಿ ಇರುವ ತ್ಯಾಜ್ಯ ಗಳನ್ನು ವಿಲೇವಾರಿ ಮಾಡುವ ಬಗ್ಗೆ ವಿಸ್ತ್ರತ ಯೋಜನೆ ರೂಪಿಸಬೇಕು. ಮಂದಾರ ಸಂತ್ರಸ್ತರಿಗೆ ಪುನರ್ವಸತಿ ಸೇರಿದಂತೆ ಅಗತ್ಯ ಪರಿಹಾರ ಒದಗಿಸುವ ಬಗ್ಗೆ ಸಮಗ್ರ ವರದಿ ಸಲ್ಲಿಸಬೇಕು. ಬಳಿಕ ಈ ಬಗ್ಗೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಹಾನಗರಪಾಲಿಕೆ ಆಯುಕ್ತ ಮುಹಮ್ಮದ್ ನಝೀರ್, ಜಂಟಿ ಆಯುಕ್ತೆ ಗಾಯತ್ರಿ ನಾಯಕ್, ಪರಿಸರ ಅಭಿಯಂತರ ಮಧು ಉಪಸ್ಥಿತರಿದ್ದರು.

ತಜ್ಞರ ಸಮಿತಿ ರಚನೆ: ಈ ಮಧ್ಯೆ, ಭೂಪಾತವಾಗಿರುವ ಪಚ್ಚನಾಡಿ ನೆಲಭರ್ತಿ ಸ್ಥಳವನ್ನು ಅಧ್ಯಯನ ಮಾಡಲು ರಾಜ್ಯ ಸರಕಾರ ನಾಲ್ವರು ತಜ್ಞರ ಸಮಿತಿ ರಚಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next