Advertisement

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

12:16 AM Nov 27, 2024 | Team Udayavani |

ಮಂಗಳೂರು: ಮಂಗಳೂರಿನಲ್ಲಿ ದೇಶದ ಮೊದಲ ಕೋಸ್ಟ್‌ಗಾರ್ಡ್‌ ಅಕಾಡೆಮಿ ಸ್ಥಾಪನೆ, ಕೊಂಕಣ ರೈಲ್ವೇಯನ್ನು ಭಾರತೀಯ ರೈಲ್ವೆ ಜತೆಗೆ ವಿಲೀನಗೊಳಿಸು ವುದು ಸಹಿತ ದ.ಕ.ದ ಸಮಗ್ರ ಅಭಿವೃದ್ಧಿಗೆ ಪೂರಕ ವಾಗಿರುವ ಪ್ರಸ್ತಾವಿತ ಪ್ರಮುಖ ಯೋಜನೆಗಳನ್ನು ಶೀಘ್ರ ಕಾರ್ಯಗತಗೊಳಿಸುವಂತೆ ಸಂಸದ ಕ್ಯಾ| ಚೌಟ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.

Advertisement

ದಿಲ್ಲಿಯಲ್ಲಿ ಶನಿವಾರ ಸಚಿವರನ್ನು ಭೇಟಿ ಮಾಡಿರುವ ಸಂಸದರು, ಈ ಹಿಂದೆ ನಿರ್ಮಲಾ ಸೀತಾರಾಮನ್‌ ರಕ್ಷಣ ಸಚಿವರಾಗಿದ್ದಾಗ ಮಂಗಳೂರಿಗೆ ಮಂಜೂರು ಮಾಡಿದ್ದ ಕೋಸ್ಟ್‌ಗಾರ್ಡ್‌ ಅಕಾಡೆಮಿ ಸ್ಥಾಪನೆಗೆ ಬಾಕಿಯಿರುವ ಪ್ರಕ್ರಿಯೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಮಂಗಳೂರನ್ನು ಜಾಗತಿಕ ಸಾಮರ್ಥ್ಯದ ಸೆಂಟರ್‌(ಜಿಸಿಸಿ) ಆಗಿಪರಿವರ್ತಿಸಿ ಜಾಗತಿಕ ಹೂಡಿಕೆ ಆಕರ್ಷಣೆಗೆ ಪೂರಕ ವಾಗುವ ಮೂಲಸೌಕರ್ಯ ಅಭಿವೃದ್ಧಿ, ಮಾನವ ಸಂಪನ್ಮೂಲ-ಕೌಶಲಾಭಿವೃದ್ಧಿಗೆ ಬೇಕಾಗುವ ಅಗತ್ಯ ಕ್ರಮ ಕೈಗೊಳ್ಳಬೇಕು. ಮಂಗಳೂರಿ ನಲ್ಲಿ ಬ್ಯಾಂಕಿಂಗ್‌ ಸಂಶೋಧನೆ ಹಾಗೂ ತರಬೇತಿ ಸಂಸ್ಥೆ (ಐಬಿಆರ್‌ಟಿ) ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಮಂಗಳೂರು ನಗರವನ್ನು ಗ್ಲೋಬಲ್‌ ಕೆಪಾಸಿಟಿ ಸೆಂಟರ್‌ ಆಗಿ ಪರಿವರ್ತಿಸುವುದಕ್ಕೆ ಪೂರಕ ಕ್ರಮ ತೆಗೆದು ಕೊಳ್ಳಬೇಕು. ಜಿಸಿಸಿ ಕೇಂದ್ರೀಕೃತ ಕೈಗಾರಿಕಾ ಪಾರ್ಕ್‌ಗಳ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು, ಕರಾವಳಿ ಭದ್ರತೆ ಹೆಚ್ಚಳ ಸಹಿತ ಮಂಗಳೂರಿನ ಆರ್ಥಿಕ-ಸಾಮಾಜಿಕ ಅಭಿವೃದ್ಧಿ ಉತ್ತೇಜಿಸುವ ಈ ಕೋಸ್ಟ್‌ ಗಾರ್ಡ್‌ ಅಕಾಡೆಮಿ ಸ್ಥಾಪನೆಗೆ ಕೇಂದ್ರದಿಂದ ಬಾಕಿಯಿರುವ ಪ್ರಕ್ರಿಯೆ ಪೂರ್ಣಗೊಳಿಸಿ ಅದನ್ನು ಶೀಘ್ರ ಅನುಷ್ಠಾನಕ್ಕೆ ತರಬೇಕು ಎಂದು ಅವರು ಮನವಿ ಮಾಡಿದರು.

 

Advertisement

Udayavani is now on Telegram. Click here to join our channel and stay updated with the latest news.

Next