Advertisement
ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವನೆ ದೃಢಪಟ್ಟಿದ್ದು, ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಮಂಗಳೂರು: ಅರ್ಕುಳ ಗ್ರಾಮದ ವಳಚ್ಚಿಲ್ ಬಸ್ ತಂಗುದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡುತ್ತಿದ್ದ ವಳಚ್ಚಿಲ್, ಕಾನಗುಡ್ಡೆ ನಿವಾಸಿ ಉಮ್ಮರುಲ್ ಫಾರೂಕ್ (22) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆತ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ. ಆತನ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.