Advertisement

Mangaluru: ಇಲೆಕ್ಟ್ರಿಕ್ ಆಟೋರಿಕ್ಷಾಗಳಿಗೆ ದ.ಕ. ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ

07:32 PM Aug 06, 2024 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಲೆಕ್ಟ್ರಿಕ್ ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ಮುಕ್ತವಾಗಿ ಸಂಚರಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಆದೇಶಿಸಿದ್ದಾರೆ.

Advertisement

ಎಲ್ಲ ಆಟೋರಿಕ್ಷಾಗಳೊಂದಿಗೆ ಇ- ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ವಲಯ 1 ರಲ್ಲಿ ನೀಲಿ ಬಣ್ಣದ ಹಾಗೂ ವಲಯ 2 ರಲ್ಲಿ ಹಳದಿ ಬಣ್ಣದ  ಸ್ಟಿಕ್ಕರ್/ ಗುರುತಿನ ಸಂಖ್ಯೆಗಳನ್ನು ಪೊಲೀಸ್ ಇಲಾಖೆಯಿಂದ ಪಡೆದು ಅಂಟಿಸಲು ಜಿಲ್ಲಾಧಿಕಾರಿಗಳು ಈ ಹಿಂದೆ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸಲಾಗಿದೆ.

ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಆರ್.ಟಿ.ಓ. ಅಧಿಕಾರಿಗಳಿಗೆ ಆದೇಶಿಸಲಾಗಿದೆ. ಅಲ್ಲದೇ, ಈ ಸಂಬಂಧ ಅವಶ್ಯವಿರುವ ಸೂಚನಾ ಫಲಕಗಳನ್ನು ಅಳವಡಿಸಲು ಮಂಗಳೂರು ನಗರ ಡಿಸಿಪಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಅಧಿಕಾರ ನೀಡಲಾಗಿದೆ.

ಮೋಟಾರು ವಾಹನ ಕಾಯ್ದೆಯಂತೆ ಪಾರ್ಕಿಂಗ್ ಸ್ಥಳಗಳನ್ನು ಮತ್ತು ನಿಲುಗಡೆ ನಿಲ್ದಾಣಗಳಿಗೆ ಸ್ಥಳಗಳನ್ನು ನಿರ್ಧರಿಸಲು ಮಂಗಳೂರು ನಗರದಲ್ಲಿ ಮಹಾನಗರಪಾಲಿಕೆ ಆಯುಕ್ತರು ಹಾಗೂ ಇತರ ಪ್ರದೇಶಗಳಲ್ಲಿ ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಅಧಿಕಾರ ನೀಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next