Advertisement
ಎರಡು ಲಕ್ಷಕ್ಕೂ ಮೀರಿ ಸೇರಿದ ಜನತೆಯ ನಡುವೆ ಕಾರ್ಯಕ್ರಮದಲ್ಲಿ ಗಮನ ಸೆಳೆದಿದ್ದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ. ಸರ್ಕಾರಿ ಕಾರ್ಯಕ್ರಮವಾದರೂ ಯಡಿಯೂರಪ್ಪ ವೇದಿಕೆಯಲ್ಲಿ ಸ್ಥಾನ ಪಡೆದರು. ಇದಕ್ಕೆ ಪ್ರಧಾನಿ ಮೋದಿ ವೈಯಕ್ತಿಕ ಆಹ್ವಾನವೇ ಕಾರಣ ಎನ್ನಲಾಗಿದೆ.
Related Articles
Advertisement
ಸಾಗರಮಾಲಾ ಯೋಜನೆಯ ಅತೀ ಹೆಚ್ಚು ಪ್ರಯೋಜನವನ್ನು ಕರ್ನಾಟಕ ಪಡೆದುಕೊಂಡಿದೆ. ರಾಜ್ಯದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳು, 2014 ರ ನಂತರ ನಾಲ್ಕು ಪಟ್ಟು ಹೆಚ್ಚು ರೈಲ್ವೆ ಯೋಜನೆಗಳ ಅನುದಾನ ಕರ್ನಾಟಕಕ್ಕೆ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಕ್ಷೇತ್ರದಲ್ಲಿ ಕಳೆದ ಎಂಟು ವರ್ಷಗಳಲ್ಲಿ 70,000 ಕೋಟಿ ರೂ.ಗಳ ಯೋಜನೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಜತೆಗೆ ಒಂದು ಲಕ್ಷ ಕೋಟಿಗೂ ಹೆಚ್ಚು ಮೊತ್ತದ ಯೋಜನೆಗಳು ಚಾಲನೆಯಲ್ಲಿವೆ ಎಂದರು.
ಇದನ್ನೂ ಓದಿ:ಭಾರತದ ಕಡಲ ಭದ್ರತೆಗೆ ಐಎನ್‌ಎಸ್ ವಿಕ್ರಾಂತ್ ಮಹತ್ವದ ಹೆಜ್ಜೆ: ರಾಹುಲ್ ಗಾಂಧಿ
ಮತ್ಸ್ಯ ಸಂಪದ ಯೋಜನೆ ಮೂಲಕ ಕರ್ನಾಟಕದ ಮೀನುಗಾರರ ಅಭಿವೃದ್ಧಿಗಾಗಿ ಕೆಲಸ ಮಾಡಲಾಗುತ್ತಿದೆ. ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರವಾಸೋದ್ಯಮ ಅಭಿವೃದ್ಧಿಗೆ ಅತ್ಯುತ್ತಮ ಸ್ಥಳಗಳಾಗಿವೆ. ಪ್ರವಾಸೋದ್ಯಮ ಅಭಿವೃದ್ಧಿ ಸಮಾಜದ ಹಲವರಿಗೆ ಲಾಭವಾಗುತ್ತದೆ. ಕ್ರೂಸ್ ಟೂರಿಸಂ ಇಲ್ಲಿ ಅಭಿವೃದ್ಧಿಯಾಗಬೇಕು ಎಂದು ಪಿಎಂ ಮೋದಿ ಹೇಳಿದರು.
ಡಬಲ್ ಇಂಜಿನ್ ಸರ್ಕಾರದ ಅಭಿವೃದ್ಧಿ: ಇಂದು ಕರಾವಳಿ ಅಭಿವೃದ್ಧಿ ಚರಿತ್ರೆಯನನ್ನು ಸುವರ್ಣಾಕ್ಷರದಲ್ಲಿ ಬರೆದಿಡುವ ದಿನ. ಡಬಲ್ ಇಂಜಿನ್ ಸರ್ಕಾರ ಏನು ಮಾಡಿದೆ ಎಂದು ಕೆಲವರು ಕೇಳುತ್ತಾರೆ. ಮೋದಿ ಮಂಗಳೂರಿಗೆ ಪಾದಾರ್ಪಣೆ ಮಾಡಿದ ವೇಳೆ ಸಿಆರ್ಝೆಡ್ ನೀತಿ ಬದಲಾವಣೆಗೆ ಒಪ್ಪಿಗೆ ಸಿಕ್ಕಿದೆ. ಕಾರವಾರದ ಮಾಜಾಳಿ ಪೋರ್ಟ್ ಅಭಿವೃದ್ಧಿಗೆ ಅನುಮೋದನೆ ಸಿಕ್ಕಿದೆ. ಮತ್ಸ್ಯ ಸಂಪದ ಯೋಜನೆ ಜಾರಿಯಾಗಿದೆ. ಇವೆಲ್ಲವೂ ಡಬಲ್ ಇಂಜಿನ್ ಸರ್ಕಾರದ ಯೋಜನೆಗಳು. ಕರ್ನಾಟಕದ ಅಭಿವೃದ್ಧಿ ಜೊತೆಗೆ ಭಾರತ ಅಭಿವೃದ್ಧಿ ಆಗುತ್ತಿದೆ. ಡಬಲ್ ಇಂಜಿನ್ ಸರ್ಕಾರ ಕರ್ನಾಟಕ ಮಾತ್ರವಲ್ಲ ಭಾರತವನ್ನೂ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.