Advertisement

Mangaluru: ಅಪಾರ್ಟ್‌ಮೆಂಟ್ ನಲ್ಲಿ ಅಗ್ನಿ ಅವಘಡ

08:59 PM Jun 30, 2023 | Team Udayavani |

ಮಂಗಳೂರು: ನಗರದ ಬಾವುಟಗುಡ್ಡೆಯ ಅಪಾರ್ಟ್‌ಮೆಂಟ್ ವೊಂದರಲ್ಲಿ ಶುಕ್ರವಾರ ಸಂಜೆ ಅಗ್ನಿ ಅವಘಡ ಸಂಭವಿಸಿದೆ.

Advertisement

ವಸತಿ ಕಟ್ಟಡದ 15ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪಾಂಡೇಶ್ವರ ಅಗ್ನಿಶಾಮಕ ಠಾಣೆಯವರು ಕಾರ್ಯಪ್ರವೃತ್ತರಾಗಿ ಘಟನಾ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ಯಶಸ್ವಿಯಾಗಿ ನಂದಿಸಿದ್ದಾರೆ. ಕೆಲ ಹೊತ್ತಿನವರೆಗೆ ದಟ್ಟ ಹೊಗೆ ಉಳಿದಿತ್ತು.

ಕಟ್ಟಡದಲ್ಲಿ ವಾಸಿಸುತ್ತಿದ್ದ ನಿವಾಸಿಗಳನ್ನು ಕೂಡಲೇ ಸ್ಥಳಾಂತರಿಸಲಾಯಿತು. ಕೆಲವು ನಿವಾಸಿಗಳು ಹೊಗೆಯನ್ನು ಉಸಿರಾಡಿ ಉಸಿರಾಟದ ತೊಂದರೆ ಅನುಭವಿಸಿದರು. ಘಟನೆಯಲ್ಲಿ ಯಾವುದೇ ಗಾಯ ಸಂಭವಿಸಿಲ್ಲ.

ತನಿಖೆಗಳು ನಡೆಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next