Advertisement
ರವಿವಾರ ನಗರದಲ್ಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸರಕಾರದ ವಶದಲ್ಲಿರುವ ದೇವಾಲಯಗಳನ್ನು ಹಿಂದೂಗಳ ವಶಕ್ಕೆ ನೀಡುವಂತೆ ಸುಪ್ರೀಂ ಕೋರ್ಟ್ ಈಗಾಗಲೇ ಆದೇಶ ನೀಡಿದೆ. ಅದರ ಹೊರತಾಗಿಯೂ ಇದುವರೆಗೆ ಯಾವುದೇ ದೇವಾಲಯಗಳನ್ನು ಸರಕಾರ ತನ್ನ ಹಿಡಿತ ದಿಂದ ಮುಕ್ತಗೊಳಿಸಿಲ್ಲ. ಇತರ ಧರ್ಮೀಯರ ಆರಾಧನ ಸ್ಥಳಗಳು ಅವರ ಹಿಡಿತದಲ್ಲಿವೆ. ದೇವಸ್ಥಾನಗಳು ಸರಕಾರ ವಶದಲ್ಲಿರುವುದರಿಂದಲೇ ಶ್ರದ್ಧಾ ಕೇಂದ್ರ
ಗಳಿಗೆ ಅಪಚಾರಗಳು ಉಂಟಾಗುತ್ತಿವೆ. ಹಿಂದೂಗಳೇ ಶ್ರದ್ಧಾ ಕೇಂದ್ರಗಳನ್ನು ನಡೆಸಿದರೆ ಯಾವುದೇ ಅಪಚಾರಗಳು ಉಂಟಾಗಲು ಅವಕಾಶ ಇರುವುದಿಲ್ಲ ಎಂದು ಸ್ವಾಮೀಜಿ ಹೇಳಿದರು.
ತಿರುಪತಿಯ ಲಡ್ಡು ಅಪವಿತ್ರವಾದ ಘಟನೆಗೆ ಸಂಬಂಧಿಸಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸ್ವಾಮೀಜಿ, ತಿರುಪತಿ-ತಿರುಮಲ ಶ್ರೀವೆಂಕಟೇಶ್ವರ ಸ್ವಾಮಿಯ ಲಡ್ಡು ಪ್ರಸಾದ ಅಪವಿತ್ರದಂತಹ ಘಟನೆ ನಡೆಯದಂತೆ ನೋಡಿಕೊಳ್ಳಬೇಕಾದ್ದು ಸರ್ಕಾರಗಳ ಕರ್ತವ್ಯ. ಸಂಬಂಧಪಟ್ಟ ವಿಭಾಗಗಳು ಈ ಬಗ್ಗೆ ನಿಗಾ ವಹಿಸಬೇಕಿತ್ತು. ಇಂತಹ ಘಟನೆ ಮರುಕಳಿಸದೇ ಇರಬೇಕಾದರೆ, ದೇವಾಲಯಗಳು ಸ್ವಂತ ಗೋಶಾಲೆ ಹೊಂದುವಂತಾಗಬೇಕು. ಜಾಗೃತ ಕೇಂದ್ರಗಳಾದಾಗ ಮಾತ್ರ ಹಿಂದೂಗಳ ನಂಬಿಕೆ, ನಡವಳಿಕೆಯ ಗೌರವಿಸಲು ಸಾಧ್ಯವಾಗುತ್ತದೆ. ಇಂತಹ ಉಪಕ್ರಮಕ್ಕೆ ಸರ್ಕಾರಗಳು ಮುಂದಾಗಬೇಕು ಎಂದರು. ಅಯೋಧ್ಯೆಯಲ್ಲಿ ಕಾಮಗಾರಿಗೆ ವೇಗ
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆಯ ಬಳಿಕ ಕಾಮಗಾರಿ ಮುಂದುವರಿದಿದೆ. ಬಾಕಿ ಉಳಿದಿರುವ ಕಾಮಗಾರಿಯನ್ನು ಶೀಘ್ರ ಮುಗಿಸುವ ನಿಟ್ಟಿನಲ್ಲಿ ಭರದಿಂದ ಕಾಮಗಾರಿ ನಡೆಯುತ್ತಿದೆ. ಮುಂದಿನ ಒಂದೂವರೆ ವರ್ಷದೊಳಗೆ ಕಾಮಗಾರಿ ಮುಗಿಸಲು ಉದ್ದೇಶಸಲಾಗಿದೆ ಎಂದು ಸ್ವಾಮೀಜಿ ತಿಳಿಸಿದರು.
Related Articles
ಚೆನ್ನೈನಲ್ಲಿ ಈ ಬಾರಿಯ ಚಾತುರ್ಮಾಸ್ಯ ವ್ರತ ಮುಗಿಸಿದ ಬಳಿಕ ಅಯೋಧ್ಯೆಗೆ ತೆರಳಿ ಒಂದು ವಾರಗಳ ಕಾಲ ಪೂಜಾ ಕಾರ್ಯದಲ್ಲಿ ಪಾಲ್ಗೊಂಡು ಅಲ್ಲಿಂದ ಪ್ರಯಾಗ, ಕಾಶಿ, ಹರಿದ್ವಾರ, ಹೃಷಿಕೇಶ ಮತ್ತು ಬದರಿ ಕ್ಷೇತ್ರಗಳನ್ನು ಸಂದರ್ಶಿಸಿ ಲೋಕಕಲ್ಯಾಣಕ್ಕಾಗಿ ಪ್ರಾರ್ಥನೆ ಮಾಡಿರುವುದಾಗಿ ಸ್ವಾಮೀಜಿ ತಿಳಿಸಿದರು.
Advertisement