Advertisement

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

07:37 PM Oct 06, 2024 | Team Udayavani |

ಮಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಪ್ರಾಚೀನ ದೇವಾಲಯಗಳು ಸೇರಿದಂತೆ ಹಲವು ದೇವಾಲಯಗಳು ಇನ್ನೂ ಸರಕಾರದ ವಶದಲ್ಲಿ ಇರಿಸಿಕೊಂಡಿರುವುದರಿಂದ ಹಿಂದೂಗಳ ನಂಬಿಕೆಗೆ ಧಕ್ಕೆ ಉಂಟು ಮಾಡುವ ಕೆಲಸಗಳಾಗುತ್ತಿವೆ. ಆದ್ದರಿಂದ ಅಯೋಧ್ಯೆ ಶ್ರೀರಾಮ ಮಂದಿರದ ಮಾದರಿಯಲ್ಲಿ ಎಲ್ಲ ದೇವಾಲಯಗಳಿಗೂ ಪ್ರತ್ಯೇಕ ವಿಶ್ವಸ್ಥ ಮಂಡಳಿ ರೂಪಿಸಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಗ್ರಹಿಸಿದರು.

Advertisement

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸರಕಾರದ ವಶದಲ್ಲಿರುವ ದೇವಾಲಯಗಳನ್ನು ಹಿಂದೂಗಳ ವಶಕ್ಕೆ ನೀಡುವಂತೆ ಸುಪ್ರೀಂ ಕೋರ್ಟ್ ಈಗಾಗಲೇ ಸೂಚನೆ ನೀಡಿದ್ದರೂ ದೇವಸ್ಥಾನಗಳು ಸರಕಾರ ವಶದಲ್ಲಿರುವುದರಿಂದಲೇ ನಮ್ಮ ಶ್ರದ್ಧಾ ಕೇಂದ್ರಗಳಿಗೆ ಅಪಚಾರಗಳು ಉಂಟಾಗುತ್ತಿವೆ. ನ್ಯಾಯಾಲಯದ ತೀರ್ಪಿನಂತೆ ಹಿಂದೂ ದೇವಾಲಯಗಳನ್ನು ಸರಕಾರವು ಸಮಾಜದ ವಶಕ್ಕೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.

ತಿರುಪತಿ ಲಡ್ಡು ಅಪವಿತ್ರವಾಗದಂತೆ ಸರಕಾರ ನಿಗಾ ವಹಿಸಬೇಕಿತ್ತು:
ತಿರುಪತಿ-ತಿರುಮಲ ಶ್ರೀವೆಂಕಟೇಶ್ವರ ಸ್ವಾಮಿಯ ಲಡ್ಡು ಪ್ರಸಾದ ಅಪವಿತ್ರದಂತಹ ಘಟನೆ ನಡೆಯದಂತೆ ನೋಡಿಕೊಳ್ಳಬೇಕಾದ್ದು ಸರ್ಕಾರಗಳ ಕರ್ತವ್ಯ. ಸಂಬಂಧಪಟ್ಟ ವಿಭಾಗಗಳು ಈ ಬಗ್ಗೆ ನಿಗಾ ವಹಿಸಬೇಕಿತ್ತು. ಇಂತಹ ಘಟನೆ ಮರುಕಳಿಸದೇ ಇರಬೇಕಾದರೆ, ದೇವಾಲಯಗಳು ಸ್ವಂತ ಗೋಶಾಲೆ ಹೊಂದುವಂತಾಗಬೇಕು. ಜಾಗೃತ ಕೇಂದ್ರಗಳಾದಾಗ ಮಾತ್ರ ಹಿಂದೂಗಳ ನಂಬಿಕೆ, ನಡವಳಿಕೆಯ ಗೌರವಿಸಲು ಸಾಧ್ಯವಾಗುತ್ತದೆ. ಇಂತಹ ಉಪಕ್ರಮಕ್ಕೆ ಸರ್ಕಾರಗಳು ಮುಂದಾಗಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next