ಮಂಗಳೂರು: ನಗರದ ಜಪ್ಪಿನಮೊಗರು ಪ್ರದೇಶದ ಗ್ಯಾರೇಜ್ ಒಂದರಲ್ಲಿ ಶುಕ್ರವಾರ ರಾತ್ರಿ ಅಗ್ನಿ ಅನಾಹುತ ಸಂಭವಿಸಿದ್ದು , ಹಲವು ವಾಹನಗಳಿಗೆ ಬೆಂಕಿ ತಗುಲಿ ಭಸ್ಮವಾಗಿದೆ.
Advertisement
ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬಂದಿಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ.
ಯಾವುದೇ ಗಾಯಗಳಾದ ಕುರಿತು ವರದಿಯಾಗಿಲ್ಲ, ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.