Advertisement

ಮಂಗಳೂರು:ತ್ಯಾಜ್ಯದ ರಾಶಿಗೆ ಬೆಂಕಿ; ನಂದಿಸಲು ಹರ ಸಾಹಸ

06:36 PM Jan 06, 2023 | Team Udayavani |

ಮಂಗಳೂರು : ನಗರದ ಪಚ್ಚನಾಡಿಯಲ್ಲಿ ಶುಕ್ರವಾರ ಮಧ್ಯಾಹ್ನದ ವೇಳೆಗೆ ತ್ಯಾಜ್ಯದ ರಾಶಿಗೆ ಬೆಂಕಿ ಆವರಿಸಿಕೊಂಡಿದೆ.

Advertisement

ಶಾಸಕ ಡಾ. ಭರತ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ಶಮನ ಮಾಡುವ ಕುರಿತಾಗಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.ಈ ಸಂದರ್ಭ ಜಿಲ್ಲಾಧಿಕಾರಿಗೆ ಕರೆ ಮಾಡಿ ಅಗ್ನಿಶಾಮಕ ವಾಹನಗಳ ವ್ಯವಸ್ಥೆ ಹಾಗೂ ಮಂಗಳೂರು ವಿಮಾನ ನಿಲ್ದಾಣದಿಂದ ಅತ್ಯಾಧುನಿಕ ಅಗ್ನಿಶಾಮಕ ವಾಹನ ಹಾಗೂ ಸಿಬಂದಿಗಳನ್ನು ಕಳುಹಿಸುವಂತೆ ಮನವಿ ಮಾಡಿದರು.

ಮಾಧ್ಯಮದೊಂದಿಗೆ ಮಾತನಾಡಿ, ಇಲ್ಲಿನ ತ್ಯಾಜ್ಯ ರಾಶಿಗೆ ಆವರಿಸಿದ ಬೆಂಕಿಯನ್ನು ನಂದಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈಗಾಗಲೇ ನೂರಕ್ಕೂ ಹೆಚ್ಚು ಸಿಬಂದಿಗಳು ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಆದಷ್ಟು ಶೀಘ್ರವಾಗಿ ಬೆಂಕಿ ನಂದಿಸಲು ಸತತ ಪ್ರಯತ್ನ ನಡೆಯುತ್ತಿದೆ ಎಂದರು.

ಇದೇ ವೇಳೆ ಇಲ್ಲಿನ ತ್ಯಾಜ್ಯವನ್ನ ಸಂಸ್ಕರಣ ವ್ಯವಸ್ಥೆಯಾಗಿ ನಿರ್ವಹಿಸಲು ಕೇಂದ್ರ ಸರಕಾರದ ಅನುದಾನದೊಂದಿಗೆ ಈಗಾಗಲೇ ಕಾಮಗಾರಿ ಆರಂಭವಾಗಿದೆ.ಮೇಯರ್ ಜಯಾನಂದ ಅಂಜನ್ ಸ್ಥಳಿಯ ಕಾರ್ಪೊರೇಟರ್ ಸಂಗೀತ ನಾಯಕ್ ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಮತ್ತಿತರ ಅಧಿಕಾರಿಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next