Advertisement
ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರಿಗೆ ದೂರು ಬಂದಾಕ್ಷಣ ಅವರು ತರಾತುರಿಯಲ್ಲಿ ನೋಟಿಸ್ ನೀಡಿರುವುದು ಸರಿಯಲ್ಲ. ರಾಜ್ಯಪಾಲರು ಅಟಾರ್ನಿ ಜನರಲ್ ಅವರನ್ನು ಕರೆಸಿ ಪರಿಶೀಲಿಸಬೇಕಿತ್ತು. ಮುಖ್ಯಮಂತ್ರಿಗಳು ಏನು ತಪ್ಪು ಮಾಡಿದ್ದಾರೆ ಎಂಬುದನ್ನು ತಿಳಿಸಲಿ ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರವರ ಅಭಿಪ್ರಾಯ ತಿಳಿಸಲು ಎಲ್ಲರಿಗೂ ಮುಕ್ತ ಅವಕಾಶಗಳಿವೆ. ನಿರ್ಬಂಧಗಳೊಂದಿಗೆ ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಅನುಮತಿ ನೀಡುತ್ತೇವೆ. ಅನೇಕ ಪಾದಯಾತ್ರೆಗಳಿಗೆ ಅಧಿಕೃತ ಅನುಮತಿ ನೀಡಲಾಗುವುದಿಲ್ಲ. ಹಿಂದೆ ನಾವು ಮೇಕೆದಾಟು ಪಾದಯಾತ್ರೆ ಮಾಡಿದ ವೇಳೆ ಅನುಮತಿ ಸಿಕ್ಕಿರಲಿಲ್ಲ ಎಂದರು.