Advertisement

Mangaluru: ಅಡಿಕೆ ಸಂಶೋಧನೆಗಾಗಿ ಅನುದಾನ: ಸಚಿವೆ ನಿರ್ಮಲಾರಿಗೆ ಕ್ಯಾಂಪ್ಕೊ ಆಗ್ರಹ

12:14 AM Dec 03, 2024 | Team Udayavani |

ಮಂಗಳೂರು: ಅಡಿಕೆಯ ಸುರಕ್ಷೆ ಮತ್ತು ಅದರ ಕ್ಯಾನ್ಸರ್‌ ರೋಗ ಶಮನಗೊಳಿಸುವ ಆಯುರ್ವೇದೀಯ ಗುಣಗಳ ಬಗ್ಗೆ ಸಮಗ್ರ ಸಂಶೋಧನೆ ನಡೆಸಬೇಕು ಹಾಗೂ ಇದಕ್ಕಾಗಿ ಮುಂಬರುವ ಬಜೆಟ್‌ನಲ್ಲಿ ಅನುದಾನ ನಿಗದಿ ಪಡಿಸುವಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಅವರು ಪತ್ರ ಬರೆದು ಮನವಿ ಮಾಡಿದ್ದಾರೆ.

Advertisement

ಅಡಿಕೆ ಕೃಷಿ ಲಕ್ಷಾಂತರ ಬೆಳೆಗಾರರಿಗೆ ಜೀವನಾಧಾರವಾಗಿದೆ. ಭಾರತದ ಸಾಂಸ್ಕೃತಿಕ ಜನಜೀವನದಲ್ಲಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಅಡಿಕೆಯು ಮಹತ್ತರ ಪಾತ್ರವನ್ನು ವಹಿಸಿರುವುದರ ಕುರಿತು ಹಣಕಾಸು ಸಚಿವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಭಾರತದಲ್ಲಿ ಸುಮಾರು 9.55 ಲಕ್ಷ ಹೆಕ್ಟೇರ್‌ಗಳಿಗೆ ಅಡಿಕೆ ಕೃಷಿ ವಿಸ್ತರಿಸಿದ್ದು, ವಾರ್ಷಿಕವಾಗಿ 14ರಿಂದ 18 ಲಕ್ಷ ಮೆಟ್ರಿಕ್‌ ಟನ್‌ಗಳಷ್ಟು ಅಡಿಕೆ ಉತ್ಪಾದನೆಯಾಗುತ್ತಿದೆ. ಕೇಂದ್ರ ಸರಕಾರ ಜಿಎಸ್‌ಟಿ ಪದ್ಧತಿ ಜಾರಿಗೊಳಿಸಿದಂದಿನಿಂದ ಈವರೆಗೆ ಬರೇ ಕ್ಯಾಂಪ್ಕೊ ಒಂದೇ ಸಂಸ್ಥೆ ಸುಮಾರು 650 ಕೋಟಿ ರೂ. ತೆರಿಗೆಯನ್ನು ಪಾವತಿಸಿರುವುದರ ಬಗ್ಗೆ ಕೇಂದ್ರ ಸಚಿವರ ಗಮನಕ್ಕೆ ತರಲಾಗಿದೆ.

ಕ್ಯಾನ್ಸರ್‌ ಶಮನ ಗುಣ
ವಿಶ್ವ ಆರೋಗ್ಯ ಸಂಸ್ಥೆಯು ಅಡಿಕೆಯನ್ನು ಕ್ಯಾನ್ಸರ್‌ ಕಾರಕ ವೆಂದು ವರ್ಗಿàಕರಿಸಿರುವುದು ಬೆಳೆ ಗಾರರನ್ನು ಸಂಕಷ್ಟಕ್ಕೀಡು ಮಾಡಿದೆ. ಅಡಿಕೆಯನ್ನು ಗುಟ್ಕ ಮತ್ತು ತಂಬಾಕಿನ ಜತೆ ಬಳಸುತ್ತಿರುವ ಕಾರಣದಿಂದ ಅದನ್ನು ಕ್ಯಾನ್ಸರ್‌ ಕಾರಕವೆಂದು ಪರಿಗಣಿಸಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ವರ್ಗೀಕರಣ ನ್ಯಾಯೋ ಚಿತವಾಗಿಲ್ಲವೆಂದು ದಾಖಲೆ ಸಮೇತ ಸಾಬೀತುಪಡಿಸಲು, ಕ್ಯಾಂಪ್ಕೊ ಹಲವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಸಿರುವ ಸಂಶೋಧನ ವರದಿಗಳನ್ನು ಸಲ್ಲಿಸಿವೆ. ಎಲ್ಲ ವರದಿಗಳೂ ಅಡಿಕೆಯ ಉಪಯೋಗ ಕ್ಯಾನ್ಸರ್‌ ಕಾರಕವಲ್ಲ ಬದಲಾಗಿ ಕ್ಯಾನ್ಸರ್‌ ಅನ್ನು ಶಮನಗೊಳಿಸುವ ಗುಣಗಳನ್ನು ಹೊಂದಿರುವ ಬಗ್ಗೆ ರುಜುವಾತು ಪಡಿಸಿವೆ.

ಬೆಂಗಳೂರಿನ ಇಂಡಿಯನ್‌ ಇನ್ಸ್ಟಿ ಟ್ಯೂಟ್‌ ಆಫ್‌ ಸೆ„ನ್ಸ್‌ , ಅಮೆರಿಕದ ಎಮರಾಯ್‌ ಯುನಿವರ್ಸಿಟಿ, ಮತ್ತು ತೈವಾನ್‌ನ ತೈಪೆ ಮೆಡಿಕಲ್‌ ಯುನಿವರ್ಸಿಟಿ ಹಾಸ್ಪಿಟಲ್‌ನ ಸಂಶೋಧನ ವರದಿಗಳಲ್ಲಿ ಅಡಿಕೆಯ ಸಾರವು ಕ್ಯಾನ್ಸರ್‌ಕಾರಕ ಗೆಡ್ಡೆಗಳ ಬೆಳವಣಿಗೆಯನ್ನು ನಿಯಂತ್ರಿಸುವ ಗುಣಗಳ ಬಗ್ಗೆ ಸಾಕ್ಷೀಕರಿಸಿವೆ.

Advertisement

ನಿಟ್ಟೆ ಪರಿಗಣಿತ ವಿವಿ ನಡೆಸಿರುವ ಸಮೀಕ್ಷೆಯಲ್ಲಿ ಬರೇ ಅಡಿಕೆಯನ್ನು ಉಪಯೋಗಿ ಸುವ ಜನರಲ್ಲಿ ಬಾಯಿ ಕ್ಯಾನ್ಸರ್‌ನ ಕುರುಹುಗಳು ಕಂಡು ಬಂದಿರುವುದಿಲ್ಲ. ಭಾರತಲ್ಲಿರುವ ಪ್ರತಿಷ್ಠಿತ ಸಂಶೋಧನ ಸಂಸ್ಥೆಗಳಾದ ಐಸಿಎಂಆರ್‌, ಐಸಿಎಆರ್‌, ಎಐಐಎಂ ಎಸ್‌ ಮತ್ತು ಇಂಡಿಯನ್‌ ಇನಿಸ್ಟಿಟ್ಯೂಟ್‌ ಆಫ್ ಸೈನ್ಸ್‌ ಗಳು ಸಂಯುಕ್ತವಾಗಿ ಅಥವಾ ಪರಸ್ಪರ ಸಹಕಾರದೊಂದಿಗೆ ಅಡಿಕೆಯನ್ನು ನಿರ್ದಿಷ್ಟವಾಗಿ ಅದರ ಮೂಲರೂಪದಲ್ಲೇ ಸಂಶೋಧನೆ ನಡೆಸುವ ಅಗತ್ಯ ಕುರಿತು ಕ್ಯಾಂಪ್ಕೊ ಪ್ರಸ್ತಾವನೆ ಸಲ್ಲಿಸಿದೆ.

ಅಡಿಕೆಯ ಉಪಯೋಗದ ಬಗ್ಗೆ ನ್ಯಾಯೋಚಿತ ಮತ್ತು ವಸ್ತುನಿಷ್ಠ ಸಂಶೋಧನೆ ನಡೆಸಿ, ಅದರ ಔಷಧೀಯ ಗುಣಗಳ ಬಗ್ಗೆ ವೈಜ್ಞಾನಿಕ ಪುರಾವೆಗಳನ್ನು ದಾಖಲೀಕರಿಸಿ ವಿಶ್ವ ಆರೋಗ್ಯ ಸಂಸ್ಥೆಗೆ ಮನವರಿಕೆ ಮಾಡಿಸಬೇಕು. ಆಗ ಲಕ್ಷಾಂತರ ಬೆಳೆಗಾರರ ಬದುಕಿಗೆ ಭರವಸೆಯನ್ನು ಕೇಂದ್ರ ಸರಕಾರ ನೀಡಿದಂತಾಗುತ್ತದೆ. ಸಂಶೋಧನೆಗೆ ಬೇಕಾದ ನಿಧಿಯನ್ನು ಮುಂದಿನ ಬಜೆಟ್‌ನಲ್ಲಿ ಹಂಚಿಕೆ ಮಾಡುವಂತೆ ಎಲ್ಲ ರೈತರ ಪರವಾಗಿ ಕಿಶೋರ್‌ ಕುಮಾರ್‌ ಕೊಡ್ಗಿ ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next