Advertisement

Mangaluru ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

09:48 PM May 12, 2024 | Team Udayavani |

ಮಂಗಳೂರು: ಮನೆಯವರು ಪ್ರವಾಸಕ್ಕೆ ಹೋದ ಸಂದರ್ಭ ಮನೆಯಲ್ಲಿದ್ದ ಚಿನ್ನಾಭರಣ ಕಳವಾಗಿರುವ ಘಟನೆ ಕಂಕನಾಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

Advertisement

ಮೇ 5ರಂದು ಮನೆಯವರು ಮೈಸೂರಿಗೆ ಪ್ರವಾಸಕ್ಕೆ ಹೋಗಿದ್ದರು. ಮೇ 7ರಂದು ಮನೆಗೆ ಬಂದು ನೋಡಿದಾಗ ಮನೆಯಲ್ಲಿದ್ದ ಸುಮಾರು 28 ಗ್ರಾಂ ತೂಕದ ಒಂದು ಚಿನ್ನದ ಬಳೆ, 3 ಚಿನ್ನದ ಉಂಗುರ ಸೇರಿದಂತೆ ಒಟ್ಟು ಅಂದಾಜು 1.60 ಲ.ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವುದು ಗೊತ್ತಾಗಿದೆ.

ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next