Advertisement
ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಸ್ಥಳದಲ್ಲಿದ್ದ 9 ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸ್ಥಳದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸಲು ಉಪಯೋಗಿಸುತ್ತಿದ್ದ 7 ದೋಣಿಗಳನ್ನು ನೀರಿನ ಅಡಿಯಲ್ಲಿ ಮುಳುಗಿಸಿಟ್ಟಿರುವುದು ದಾಳಿ ಸಂದರ್ಭದಲ್ಲಿ ಪತ್ತೆಯಾಗಿದೆ. ಮಂಗಳೂರು ಉಪವಿಭಾಗಾ ಧಿಕಾರಿ ಹರ್ಷವರ್ಧನ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಗಣಿ ಇಲಾಖೆಯ ಭೂವಿಜ್ಞಾನಿ ಗಿರೀಶ್ ಮೋಹನ್ ಮತ್ತಿತರರು ಇದ್ದರು.