Advertisement

ಮಂಗಳೂರು: ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ; ಆರೋಪಿ ಬಂಧನ

08:37 PM Mar 20, 2023 | Team Udayavani |

ಮಂಗಳೂರು: ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿಕೊಂಡು ಒಳ್ಳೆಯ ಲಾಭಾಂಶವನ್ನು ಪಡೆಯಬಹುದು ಎಂದು ಹಲವಾರು ಮಂದಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಹಣವನ್ನು ಹೂಡಿಕೆ ಮಾಡಿಸಿಕೊಂಡು ವಂಚನೆ ಮಾಡಿದ ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Advertisement

ಬಂಧಿತ ಆರೋಪಿ ಹಂಝಾ ಸಿ.ಟಿ. ಎನ್ನುವವನಾಗಿದ್ದು, ಕೇರಳದ ಮಲಪ್ಪುರ ಜಿಲ್ಲೆಯ ಚಕ್ಕರತೋಡಿ ನಿವಾಸಿಯಾಗಿದ್ದಾನೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕ್ರಿಪ್ಟೋ ಕರೆನ್ಸಿ ವ್ಯವಹಾರದಲ್ಲಿ ಕೋಟ್ಯಂತರ ರೂ. ಹಣ ಲಾಭ ಗಳಿಸಬಹುದು ಎಂದು ಹಲವಾರು ಮಂದಿಯಿಂದ ಹಣವನ್ನು ಹೂಡಿಕೆ ಮಾಡಿಕೊಂಡು ತಿಂಗಳಿಗೆ 25 % ಲಾಭಾಂಶವನ್ನು ನೀಡುವುದಾಗಿ ಮಂಗಳೂರು ಕಣ್ಣೂರು ಪರಿಸರದ ನಿವಾಸಿಯಿಂದ ಹಾಗೂ ಇತರ ಸಾರ್ವಜನಿಕರಿಂದ ಹಮವನ್ನು ಬ್ಯಾಂಕ್ ಖಾತೆಗಳಿಗೆ ಹೂಡಿಕೆ ಮಾಡಿಸಿಕೊಂಡು ಲಾಭಾಂಶವನ್ನು ನೀಡದೇ ವಂಚನೆ ಮಾಡಲಾಗಿದೆ.

ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗ್ಡೆ, ಪೊಲೀಸ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್‌ಐ ರಾಜೇಂದ್ರ, ಹಾಗೂ ಸಿಸಿಬಿ ಸಿಬಂದಿಗಳು ಪಾಲ್ಗೊಂಡಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next