Advertisement

Mangaluru: ದಾಂಡಿಯಾ ನೃತ್ಯ ಆಯೋಜನೆಗೆ ಅವಕಾಶ ನೀಡದಂತೆ ಪೊಲೀಸ್‌ ಆಯುಕ್ತರಿಗೆ ಮನವಿ

03:45 PM Oct 01, 2024 | Team Udayavani |

ಮಂಗಳೂರು: ಮಂಗಳೂರು ನಗರದ ಸುತ್ತಮುತ್ತ ನವರಾತ್ರಿಯ ಧಾರ್ಮಿಕ ದಾಂಡಿಯಾ ಹೆಸರಿನಲ್ಲಿ ಮಾದಕ ದ್ರವ್ಯ ಸೇವನೆಯ ಅಸಭ್ಯ ನೃತ್ಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಯುವಕ -ಯುವತಿಯರು ಇದರಲ್ಲಿ ಮುಕ್ತವಾಗಿ ಭಾಗವಹಿಸಬಹುದು ಎಂದು ಆಮಂತ್ರಣ ಪತ್ರಿಕೆಗಳನ್ನು ಹಂಚಿದ್ದು, ಇಂತಹ ಕಾರ್ಯಕ್ರಮಗಳಿಗೆ ಅವಕಾಶ ನೀಡಬಾರದು ಎಂದು ವಿಶ್ವ ಹಿಂದೂ ಪರಿಷತ್‌ ದುರ್ಗಾವಾಹಿನಿ ನಗರದ ಪೊಲೀಸ್‌ ಆಯುಕ್ತರಿಗೆ ಮನವಿ ಮಾಡಿದೆ.

Advertisement

ದಾಂಡಿಯಾ ನೃತ್ಯ ಜಗನ್ಮಾತೆ ದುರ್ಗಾದೇವಿಯ ಹೆಸರಿನಲ್ಲಿ ನವರಾತ್ರಿ ಸಂದರ್ಭದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮ. ಕರಾವಳಿಯ ಪರಶುರಾಮ ಸೃಷ್ಟಿಯ ಈ ಪವಿತ್ರ ಭೂಮಿಯಲ್ಲಿ ಧಾರ್ಮಿಕ ಹೆಸರಿನಲ್ಲಿ ಅಸಭ್ಯ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು. ಕಳೆದ ವರ್ಷ ನಡೆದ ಇಂತಹ ಕಾರ್ಯಕ್ರಮಗಳಲ್ಲಿ ಡ್ರಗ್ಸ್‌, ಮಾದಕದ್ರವ್ಯ ಸೇವನೆ, ಅಸಭ್ಯ ನೃತ್ಯಗಳ ಬಗ್ಗೆ ದೂರು ಬಂದಿದ್ದು, ಇದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಮಂಗಳೂರು ಕೋಮು ಸೂಕ್ಷ್ಮ ಪ್ರದೇಶವಾಗಿದ್ದು, ಈ ರೀತಿಯ ಕಾರ್ಯಕ್ರಮದಿಂದ ಕೋಮು ಸೌಹಾರ್ದಕ್ಕೆ ಧಕ್ಕೆಯಾಗುವ ಸಾಧ್ಯತೆ ಇರುವುದರಿಂದ ಅನುಮತಿ ನೀಡಬಾರದು ಎಂದು ದುರ್ಗಾವಾಹಿನಿ ಜಿಲ್ಲಾ ಸಂಯೋಜಕಿ ಶ್ವೇತಾ ಅದ್ಯಪಾಡಿ, ಸಹ ಸಂಯೋಜಕಿ ತುಳಸಿ ಎಸ್‌.ಮೆಂಡನ್‌, ಮಾತೃಶಕ್ತಿ ಜಿಲ್ಲಾ ಸಂಯೋಜಕಿ ಸುಕನ್ಯಾ ರಾವ್‌ ಅವರು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: Panaji: ಮನೆ ಮುಂದೆ ನಿಲ್ಲಿಸಿದ್ದ ಕಾರು ಕಳವು… ಪೊಲೀಸರಿಂದ ಆರೋಪಿಯ ರೇಖಾಚಿತ್ರ ಬಿಡುಗಡೆ

Advertisement

Udayavani is now on Telegram. Click here to join our channel and stay updated with the latest news.

Next