Advertisement

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

01:31 PM May 04, 2024 | Team Udayavani |

ಮಂಗಳೂರು: ಇಲ್ಲಿನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆಯ ಇಮೇಲ್ ಬಂದಿರುವುದಾಗಿ ವರದಿಯಾಗಿದೆ. ಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸರು ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಬಿಗಿಗೊಳಿಸಿದ್ದಾರೆ.

Advertisement

ಮೂಲಗಳ ಪ್ರಕಾರ, ಏಪ್ರಿಲ್ 29 ರಂದು ಇಮೇಲ್ ಸ್ವೀಕರಿಸಲಾಗಿದೆ. ಬಂದಿರುವ ಬೆದರಿಕೆಯ ಬಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಪೊಲೀಸ್ ದೂರು ದಾಖಲಿಸಿದ್ದಾರೆ.

ವಿಮಾನ ನಿಲ್ದಾಣದ ಮೂರು ಸ್ಥಳಗಳಲ್ಲಿ ಸ್ಫೋಟಕ ಸಾಧನಗಳನ್ನು ಇರಿಸಲಾಗಿದೆ ಎಂದು ಇಮೇಲ್ ಉಲ್ಲೇಖಿಸಿದೆ ಎಂದು ಮೂಲಗಳು ತಿಳಿಸಿವೆ.

ಇಮೇಲ್‌ನ ಮೂಲದ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next