Advertisement

Mangaluru ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ

07:06 PM Jun 20, 2024 | Team Udayavani |

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ ಇ ಮೇಲ್ ಬಂದಿದೆ. ಜೂ.18 ರಂದು ಮಧ್ಯಾಹ್ನ 12.43 ಕ್ಕೆ ವಿಮಾನ ನಿಲ್ದಾಣದ ಇ ಮೇಲ್ ಗೆ ಬೆದರಿಕೆ ಸಂದೇಶ ಬಂದಿದ್ದು, ಕೆಲವೇ ಕ್ಷಣ ಗಳಲ್ಲಿ ಸ್ಫೋಟಗೊಳ್ಳಲಿದೆ ಎಂದು ಸಂದೇಶ ಕಳುಹಿಸಲಾಗಿತ್ತು.

Advertisement

ವಿಮಾನ ನಿಲ್ದಾಣದ ಮುಖ್ಯ ಭದ್ರತಾ ಅಧಿಕಾರಿ ಬಜಪೆ ಠಾಣೆಗೆ ದೂರು ನೀಡಿದ್ದಾರೆ. ವಿಮಾನ‌ ನಿಲ್ದಾಣದ ಆವರಣದಲ್ಲಿ ತಪಾಸಣೆ‌ ನಡೆಸಿ, ಯಾವುದೇ ಆತಂಕ ಇಲ್ಲ ಎಂದು ಭದ್ರತಾ ಅಧಿಕಾರಿಗಳು ಖಚಿತ ಪಡಿಸಿದ್ದಾರೆ.

ದೇಶದ ಇತರ 41 ವಿಮಾನ ನಿಲ್ದಾಣಗಳಿಗೂ ಇದೇ ರೀತಿಯ ಬೆದರಿಕೆ ಇಮೇಲ್ ಬಂದಿವೆ ಎಂದು ತಿಳಿದು ಬಂದಿದೆ. ವಿಮಾನ ನಿಲ್ದಾಣಕ್ಕೆ ಏಪ್ರಿಲ್ 29 ರಂದು ಮತ್ತು 2023 ರ ಡಿ.26 ರಂದೂ ಬಾಂಬ್ ಬೆದರಿಕೆ ಇ ಮೇಲ್ ಬಂದಿತ್ತು.

Advertisement

Udayavani is now on Telegram. Click here to join our channel and stay updated with the latest news.

Next