Advertisement
ಇದನ್ನೂ ಓದಿ:ಟಿ20 ಮ್ಯಾಚ್; ಒಂದೇ ಓವರ್ ನಲ್ಲಿ ಆರು ಸಿಕ್ಸರ್ ಚಚ್ಚಿದ ಇಫ್ತಿಕಾರ್ ಅಹಮದ್; ವಿಡಿಯೋ ನೋಡಿ
Related Articles
Advertisement
ಘಟನೆ ಬಗ್ಗೆ ಮಂಗಳೂರು ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಟ್ಟು 12 ಗ್ರಾಂ ತೂಕದ 60,000 ರೂ. ಮೌಲ್ಯದ 3 ಚಿನ್ನದ ಸರಗಳನ್ನು ದರೋಡೆ ಮಾಡಲಾಗಿದೆ ಎಂದು ಮಾಲಕರು ಪೊಲೀಸರಿಗೆ ದೂರು ನೀಡಿದ್ದಾರೆ. ದುಷ್ಕರ್ಮಿ ಮಾಸ್ಕ್, ಕ್ಯಾಪ್ ಮತ್ತು ಜರ್ಕಿನ್ ಧರಿಸಿದ್ದ. ಆತ ಕೃತ್ಯ ನಡೆಸುವಾಗಲೂ ಅದನ್ನು ತೆಗೆದಿರಲಿಲ್ಲ. ಅಲ್ಲದೆ ಜುವೆಲರಿ ಅಂಗಡಿಯೊಳಗಿನ ಸಿಸಿ ಕೆಮರಾದ ದೃಶ್ಯ ಸಮರ್ಪಕವಾಗಿ ದೊರೆಯದೆ ಇರುವುದು ಕೂಡ ತನಿಖೆಗೆ ತೊಡಕಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಡ ಕುಟುಂಬದ ಅಮಾಯಕ
ದುಷ್ಕರ್ಮಿಗಳಿಂದ ಹತ್ಯೆಯಾದ ಜುವೆಲರಿ ಅಂಗಡಿಯ ಸಿಬಂದಿ ರಾಘವ ಆಚಾರ್ಯ (55) ಅವರದ್ದು ಬಡ ಕುಟುಂಬ. ಅತ್ತಾವರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಹಲವು ವರ್ಷಗಳಿಂದ ವಿವಿಧೆಡೆ ಚಿನ್ನದ ಅಂಗಡಿಗಳಲ್ಲಿ ಕೆಲಸ ಮಾಡಿ ಕುಟುಂಬ ನಿರ್ವಹಣೆ ಮಾಡುತ್ತಿದ್ದರು. ಕಳೆದ 7 ವರ್ಷಗಳಿಂದ ಕೃತ್ಯ ನಡೆದ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ರಾಘವ ಆಚಾರ್ಯ ಅವರ ಓರ್ವ ಪುತ್ರ ಊರಿನಲ್ಲಿ ಸರಿಯಾದ ಕೆಲಸ ಸಿಗದೆ ಇತ್ತೀಚೆಗಷ್ಟೆ ದುಬಾೖಗೆ ಕೆಲಸ ಹುಡುಕಿಕೊಂಡು ಹೋಗಿದ್ದರು. ಇನ್ನೋರ್ವ ಪುತ್ರ ಕೂಡ ಉದ್ಯೋಗವಿಲ್ಲದೆ ಪರದಾಡುತ್ತಿದ್ದಾರೆ. ಪುತ್ರಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ರಾಘವ ಅವರ ಪತ್ನಿ ಬೇಕರಿಯಲ್ಲಿ ಕೆಲಸ ಮಾಡುತ್ತಾ ಕುಟುಂಬಕ್ಕೆ ಹೆಗಲು ಕೊಡುತ್ತಿದ್ದಾರೆ. ಇದೀಗ ರಾಘವ ಅವರ ಹತ್ಯೆಯಿಂದ ಕುಟುಂಬ ಕಂಗಾಲಾಗಿದೆ.