Advertisement

Mangaluru ಕರ್ಣಾಟಕ ಬ್ಯಾಂಕ್‌ ಜಿಎಂ ಸಾವು: ಮುಂದುವರಿದ ತನಿಖೆ

12:53 AM Nov 11, 2023 | Team Udayavani |

ಮಂಗಳೂರು: ಕರ್ಣಾಟಕ ಬ್ಯಾಂಕ್‌ನ ಪ್ರಧಾನ ಕಚೇರಿಯ ಸಿಸಿಒ ವಾದಿರಾಜ್‌ ಕೆ.ಎ. (51) ಸಾವಿನ ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರೆಸಿದ್ದಾರೆ.

Advertisement

ತನಿಖೆ ಪ್ರಗತಿಯಲ್ಲಿದೆ. ಬ್ಯಾಂಕ್‌ನವರಿಂದಲೂ ಮಾಹಿತಿ ಪಡೆಯಲಾಗುತ್ತಿದೆ. ಡೆತ್‌ನೋಟ್‌ ಸಿಕ್ಕಿಲ್ಲ. ಮರಣೋತ್ತರ ಪರೀಕ್ಷೆಯ ವರದಿ ಕೈ ಸೇರಿಲ್ಲ ಎಂದು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ತಿಳಿಸಿದ್ದಾರೆ.

ಗುರುವಾರ ಬೆಳಗ್ಗೆ ಅಪಾರ್ಟ್‌ಮೆಂಟ್‌ನಲ್ಲಿ ಕತ್ತು ಮತ್ತು ಹೊಟ್ಟೆಗೆ ಚಾಕುವಿನಿಂದ ಇರಿದು ಗಂಭೀರ ಗಾಯಗೊಡ ಸ್ಥಿತಿಯಲ್ಲಿದ್ದ ವಾದಿರಾಜ್‌ ಅವರನ್ನು ಆಸ್ಪತ್ರೆಗೆ ದಾಖಲಾಸಲಾಗಿತ್ತು. ಆದರೆ ಚಿಕಿತ್ಸೆ ಫ‌ಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇದೊಂದು ಆತ್ಮಹತ್ಯೆ ಎಂಬುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ವಾದಿರಾಜ್‌ ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next