Advertisement
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಟಿ ಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗೊಂದಲ ಸೃಷ್ಟಿಸಲು ಮುಂದಾದ ಬಿಜೆಪಿಯವರಿಗೆ ಉಪಚುನಾವಣೆಯಲ್ಲಿ ಜನರು ಸರಿಯಾದ ಉತ್ತರ ನೀಡಿದ್ದಾರೆ ಎಂದರು. ಬಿಪಿಎಲ್ ಪಡಿತರ ಚೀಟಿಗಳನ್ನು ಆರ್ಥಿಕವಾಗಿ ಹಿಂದುಳಿದ ಮಾನದಂಡ ದಂತೆ ನೀಡಬೇಕಾಗಿದ್ದು, ಅನರ್ಹರಿಗೆ ನೀಡಿರುವ ಕಾರ್ಡ್ಗಳನ್ನು ಮಾತ್ರವೇ ರದ್ದುಪಡಿಸಲಾಗುತ್ತದೆ.
Related Articles
ಜಿಲ್ಲೆಯ ನೂತನ ಸಂಸದ ಬ್ರಿಜೇಶ್ ಚೌಟ ಅವರು ಪರದೇಶದಲ್ಲಿರುವ ನಮ್ಮೂರಿನವರಿಂದ ಹೂಡಿಕೆ ಮಾಡಿಸುವ ಕಾರ್ಯವನ್ನು ನಾನು ಅಭಿನಂದಿಸುತ್ತೇನೆ. ಚುನಾವಣ ಪ್ರಣಾಳಿಕೆಯಲ್ಲಿ ನನ್ನ ಭರವಸೆಗಳಲ್ಲಿ ಇದೂ ಸೇರಿತ್ತು ಎಂದು ಪದ್ಮರಾಜ್ ಹೇಳಿದರು. ಮಾಜಿ ಮೇಯರ್ ಶಶಿಧರ ಹೆಗ್ಡೆ, ಪ್ರಮುಖ ರಾದ ಶಬ್ಬೀರ್, ಹೇಮಂತ್ ಗರೋಡಿ, ಸಲೀಂ, ದುರ್ಗಾ ಪ್ರಸಾದ್, ಇಮ್ರಾನ್, ಹಬೀಬ್ ಉಪಸ್ಥಿತರಿದ್ದರು.
Advertisement
ಕಾಂಗ್ರೆಸ್ ಗೆಲುವಿಗೆ ಜನಾರ್ದನ ಪೂಜಾರಿ ಹರ್ಷಬಂಟ್ವಾಳ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳು ಹಾಗೂ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವುದಕ್ಕೆ ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಗೆಲುವಿನ ಮೂಲಕ ಗಾಂಧಿ ಕುಟುಂಬದ ಮತ್ತೂಬ್ಬ ಮಹಿಳಾ ನಾಯಕಿ ಲೋಕಸಭೆ ಪ್ರವೇಶಿಸಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸರಕಾರ ಜನತೆಗೆ ನೀಡಿದ ಗ್ಯಾರಂಟಿ ಯೋಜನೆಗಳು, ಉತ್ತಮ ಆಡಳಿತದಿಂದ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ಇಟ್ಟು ಮತ ಚಲಾಯಿಸಿದ ಪರಿಣಾಮ ಎಲ್ಲ ಮೂರು ಕ್ಷೇತ್ರಗಳಲ್ಲಿ ಪಕ್ಷ ಗೆಲ್ಲುವಂತಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.