Advertisement

Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ

08:32 PM Nov 28, 2024 | Team Udayavani |

ಮಂಗಳೂರು: ಕಾನೂನು ಬಾಹಿರವಾಗಿ ಮದ್ಯ ಸಾಗಾಟ, ಮಾರಾಟ ಮತ್ತು ದಾಸ್ತಾನು ಇರಿಸಿದ್ದ ಪ್ರಕರಣಕ್ಕೆ ಸಂಬಂಧಿ ಸಿದಂತೆ ಕೋಡಿಕಲ್‌ ನಿವಾಸಿ ರಿತೇಶ್‌ ನಿರಪರಾಧಿ  ಎಂದು 6ನೇ ಜೆ.ಎಂ.ಎಫ್‌.ಸಿ. ನ್ಯಾಯಾಲಯ ಆದೇಶಿಸಿದೆ.

Advertisement

ಕೊರೊನಾ ಕಾಲದಲ್ಲಿ ಕೋಡಿಕಲ್‌ ಬಳಿ ದ್ವಿಚಕ್ರ ವಾಹನದಲ್ಲಿ ಸಣ್ಣ ಸ್ಯಾಚೆಟ್‌ಗಳಲ್ಲಿ ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ಆರೋಪಿ ಮದ್ಯದ ಸ್ಯಾಚೆಟ್‌ಗಳನ್ನು ದ್ವಿಚಕ್ರ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ. ಇದನ್ನು ವಶಪಡಿಸಿಕೊಂಡಿರುವ ಅಬಕಾರಿ ಇಲಾಖೆಯ ಅ ಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ನಿರೀಕ್ಷಣ ಜಾಮೀನು ಪಡೆದು ಅನಂತರ ನ್ಯಾಯಾಲಯಕ್ಕೆ ಹಾಜರಾಗಿದ್ದ.

ಸಾಕ್ಷಿ ಹೇಳಿಕೆಗಳನ್ನು ಗಮನಿಸಿ, ವಾದ ಪ್ರತಿವಾದವನ್ನು ಆಲಿಸಿದ ಜೆ.ಎಂ.ಎಫ್‌.ಸಿ. ನ್ಯಾಯಾಲಯ ಆರೋಪಿಯನ್ನು ನಿರಪರಾಧಿ ಎಂದು ಬಿಡುಗಡೆಗೊಳಿಸಿದೆ. ಆರೋಪಿ ಪರ ನ್ಯಾಯವಾದಿ ಶಶಿರಾಜ್‌ ರಾವ್‌ ಕಾವೂರು ವಾದಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next