Advertisement

ಮಂಗಳೂರು: ಅಕ್ರಮ ಮರಳುಗಾರಿಕೆ ಅಡ್ಡೆಗಳ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ

05:23 PM Dec 09, 2022 | Team Udayavani |

ಮಂಗಳೂರು : ಲೋಕಾಯುಕ್ತ ಪೊಲೀಸರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಸಲಾಗುತ್ತಿದ್ದ ಸ್ಥಳಗಳಲ್ಲಿ ದಾಳಿ ನಡೆಸಿ ಲಾರಿ, ಟಿಪ್ಪರ್, ಜೆಸಿಬಿ ಮತ್ತು ಮರಳು ಸೇರಿದಂತೆ ಒಟ್ಟು ಸುಮಾರು 40 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡು ಮೂರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆಯ ಬಗ್ಗೆ ಲೋಕಾಯುಕ್ತಕ್ಕೆ ದೂರುಗಳು ಬಂದ ಹಿನ್ನಲೆಯಲ್ಲಿ ಮಂಗಳೂರು ವಿಭಾಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಲಕ್ಷ್ಮೀಗಣೇಶ್ ಕೆ. ಡಿವೈಎಸ್‌ಪಿ ಕಲಾವತಿ , ಡಿವೈಎಸ್‌ಪಿ ಚಲುವರಾಜು ಬಿ,ಇನ್ಸ್‌ಪೆಕ್ಟರ್ ಅಮಾನುಲ್ಲಾ ಎಸ್ ರವರ ನೇತೃತ್ವದ 03 ತಂಡಗಳನ್ನು ರಚಿಸಿ ದಾಳಿಗೆ ಆದೇಶಿಸಲಾಗಿತ್ತು.

ತಂಡವು ಮುಲ್ಕಿ, ಬೆಳ್ತಂಗಡಿ, ಮತ್ತು ಬಂಟ್ವಾಳದ ಹಲವು ಕಡೆಗಳಲ್ಲಿ ಅಕ್ರಮ ಮರಳುಗಾರಿಕೆ ಸ್ಥಳಗಳಲ್ಲಿ ದಾಳಿ ನಡೆಸಿ ಲಾರಿ, ಟಿಪ್ಪರ್, ಜೆಸಿಬಿ, ಮತ್ತು ಮರಳು ಸೇರಿದಂತೆ ಒಟ್ಟು ಸುಮಾರು 40 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಹಸ್ತಾಂತರಿಸಿದ್ದು, ಈ ಬಗ್ಗೆ ಮೂರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದೆ. ಇನ್ನು ಅನೇಕ ಕಡೆಗಳಲ್ಲಿ ಅಕ್ರಮವಾಗಿ ಗಣಿಗಾರಿಕೆ ಮತ್ತು ಮಾಡುತ್ತಿರುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಅಕ್ರಮ ಮರಳುಗಾರಿಕೆಯಿಂದ ಸರಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗುತ್ತಿದ್ದು ಈ ವಿಚಾರದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯತನದ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಪೊಲೀಸ್‌ ಅಧೀಕ್ಷಕ ಲಕ್ಷ್ಮೀಗಣೇಶ್ ಕೆ. ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next