Advertisement

‘ಮಾಚಿದೇವರ ಸಂದೇಶ ಜೀವನದಲ್ಲಿ ಅಳವಡಿಸಿ’

04:47 AM Feb 02, 2019 | |

ಕೂಳೂರು: ಲಿಂಗ ಭೇದವಿಲ್ಲದ ಮತ್ತು ಸಮಾನ ಸಮಾಜದ ಸಂಕೇತ ಮಡಿ ವಾಳ ಮಾಚಿದೇವರು. ಅವರ ವಚನಗಳ ಸಂದೇಶವನ್ನು ನಾವೆಲ್ಲ ಜೀವನದಲ್ಲಿ ಅಳವಡಿಸಬೇಕೆಂದು ಶಾಸಕ ಡಾ| ಭರತ್‌ ಶೆಟ್ಟಿ ವೈ. ಹೇಳಿದರು.

Advertisement

ಬಂಗ್ರಕೂಳೂರಿನ ಮಡಿವಾಳ ಸಭಾ ಭವನದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳರ ಸಂಘ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಜಯಂತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗೋವಿಂದದಾಸ್‌ ಕಾಲೇಜು, ಸುರತ್ಕಲ್‌ ಇದರ ಉಪಪ್ರಾಂಶುಪಾಲ ಪ್ರೊ| ಕೃಷ್ಣಮೂರ್ತಿ ಕೆ. ಅವರು ಜಯಂತಿಯ ಸಂದೇಶವನ್ನು ನೀಡಿ 12ನೇ ಶತಮಾನ ದಲ್ಲಿ ಅನೇಕ ವಚನಗಳ ಮೂಲಕ ಸಮಾಜದಲ್ಲಿದ್ದಂತಹ ಅನಿಷ್ಟಗಳನ್ನು ಹೋಗಲಾಡಿಸಿದರು. ಅವರ ವಚನಗಳು ಸಾರ್ವಕಾಲಿಕ ಸತ್ಯವಾದವುಗಳು ಎಂದು ಹೇಳಿದರು.

ತಾಲೂಕು ಪಂಚಾಯತ್‌ ಅಧ್ಯಕ್ಷ ಮಹಮ್ಮದ್‌ ಮೊನು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಎಸ್‌. ಪ್ರದೀಪ್‌ ಕುಮಾರ್‌ ಕಲ್ಕೂರ, ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳ ಸಂಘ ಮಂಗಳೂರು ಇದರ ಅಧ್ಯಕ್ಷ ಬಿ.ಎನ್‌. ಪ್ರಕಾಶ್‌, ಮಹಾನಗರ ಪಾಲಿಕೆಯ ಸದಸ್ಯ ಪ್ರಕಾಶ್‌ ಸಾಲ್ಯಾನ್‌ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್‌ ಸ್ವಾಗತಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next