Advertisement

Mangaluru: ಕಾರಾಗೃಹದೊಳಗೆ ಮೊಬೈಲ್ ಎಸೆಯಲು ಯತ್ನಿಸಿದವ ಅರೆಸ್ಟ್

07:55 PM Jan 06, 2025 | Team Udayavani |

ಮಂಗಳೂರು: ಕಾರಾಗೃಹದೊಳಗೆ ಮೊಬೈಲ್ ಮತ್ತು ಸಿಗರೆಟ್ ಎಸೆಯಲು ಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಪಂಜಿಮೊಗರಿನ ಪ್ರಜ್ವಲ್(21) ಬಂಧಿತ ಆರೋಪಿ. ರವಿವಾರ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಕೆನರಾ ಕಾಲೇಜಿನ ಮುಖ್ಯದ್ವಾರದ ಒಳಗೆ ಪ್ರವೇಶಿಸಿದ ಆರೋಪಿ ಅಲ್ಲಿಂದ ಕಾರಾಗೃಹದ ಒಳಗೆ ಕೆಂಪು ಬಣ್ಣದ ಗಮ್‌ಟೇಪ್‌ನಿಂದ ಸುತ್ತಿದ ಪೊಟ್ಟಣಗಳನ್ನು ಎಸೆಯಲು ಪ್ರಯತ್ನಿಸುತ್ತಿದ್ದ.ಇದನ್ನು ಗಮನಿಸಿದ ಗಸ್ತು ಕರ್ತವ್ಯದಲ್ಲಿದ್ದ ಕೆಎಸ್‌ಐಎಸ್‌ಎ- ಸಿಬಂದಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪೊಟ್ಟಣದೊಳಗೆ ಎರಡು ಕೀ ಪ್ಯಾಡ್ ಮೊಬೈಲ್ ಮತ್ತು ಎರಡು ಪ್ಯಾಕೆಟ್ ಸಿಗರೇಟ್ ಇತ್ತು. ಪ್ರಜ್ವಲ್ ಈ ಹಿಂದೆ ಪ್ರಕರಣವೊಂದರಲ್ಲಿ ಬಂಧಿಸಲ್ಪಟ್ಟು ಕಾರಾಗೃಹದಲ್ಲಿದ್ದ. ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next