Advertisement
ನಗರದಲ್ಲಿ ಪ್ರತೀ ದಿನ ಸುಮಾರು 250 ಟನ್ಗೂ ಹೆಚ್ಚಿನ ತ್ಯಾಜ್ಯ ಸಂಗ್ರಹವಾಗುತ್ತದೆ. ಇದನ್ನು ಪಚ್ಚನಾಡಿಗೆ ಸಾಗಿಸಿ ಸಂಸ್ಕರಣೆ ಮಾಡಲಾಗುತ್ತದೆ. ಇಲ್ಲಿ ಭೂ ಭರ್ತಿ ಮಾಡುವ ತ್ಯಾಜ್ಯದ ಪ್ರಮಾಣ ಅಧಿಕವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಸತಿ ಸಮುಚ್ಚಯ, ಮಾಲ್ಗಳಲ್ಲಿ ಸಂಗ್ರಹವಾಗುವ ಹಸಿ ತ್ಯಾಜ್ಯವನ್ನು ಅಲ್ಲೇ ಸಂಸ್ಕರಣೆ ಮಾಡಬೇಕೆಂಬ ನಿಯಮವನ್ನು ಕಡ್ಡಾಯಗೊಳಿಸಲು ಪಾಲಿಕೆ ಮುಂದಾಗಿದೆ.
ಪಾಲಿಕೆ ವ್ಯಾಪ್ತಿಯಲ್ಲಿರುವ ಬೃಹತ್ ತ್ಯಾಜ್ಯ ಉತ್ಪಾದಕರಾದ ಮಾಲ್ಗಳು, ವಸತಿ ಸಮುಚ್ಚಯಗಳಲ್ಲಿ 2025ರ ಜನವರಿ ತಿಂಗಳ ಅಂತ್ಯದ ಬಳಿಕ ಹಸಿ ತ್ಯಾಜ್ಯವನ್ನು ತಮ್ಮ ಆವರಣದಲ್ಲಿಯೇ ಸಂಸ್ಕರಿಸಿ ವಿಲೇವಾರಿ ಮಾಡಬೇಕು. ಒಂದು ವೇಳೆ ವಿಫಲವಾದಲ್ಲಿ ಘನ ತ್ಯಾಜ್ಯ ನಿರ್ವಹಣೆ ನಿಯಮಗಳು 2016 ಮತ್ತು ಮನಪಾ ಘನ ತ್ಯಾಜ್ಯ ನಿರ್ವಹಣೆ ಬೈಲಾ-2019 ರ ಪ್ರಕಾರ 15,000 ರೂ. ದಂಡ ವಿಧಿಸಲು ಅವಕಾಶವಿದೆ. ಈ ನಿಯಮ ಕಟ್ಟುನಿಟ್ಟಾಗಿ ಜಾರಿ ಮಾಡಲು ಪಾಲಿಕೆ ಈಗಿಂದಲೇ ಸಿದ್ಧತೆ ಮಾಡುತ್ತಿದೆ.
Related Articles
Advertisement
ತ್ಯಾಜ್ಯ ಸಂಸ್ಕರಣೆಗೆ ಸೂಚಿಸಲಾಗಿದೆಪಾಲಿಕೆ ವ್ಯಾಪ್ತಿಯಲ್ಲಿ ನಿಯಮದ ಪ್ರಕಾರ ತ್ಯಾಜ್ಯ ನಿರ್ವಹಣೆಗೆ ಪಾಲಿಕೆ ಮುಂದಾಗಿದೆ. ಅದರಂತೆ 30ಕ್ಕಿಂತ ಹೆಚ್ಚಿನ ವಸತಿ ಸಮುಚ್ಚಯಗಳು ಸಹಿತ ಮಾಲ್, ವಾಣಿಜ್ಯ ಸಂಸ್ಥೆಗಳಲ್ಲಿ ತ್ಯಾಜ್ಯ ಸಂಸ್ಕರಣೆಗೆ ಮಾಡಲು ಸೂಚನೆ ನೀಡಲಾಗಿದೆ.
– ಆನಂದ್ ಸಿ.ಎಲ್., ಪಾಲಿಕೆ ಆಯುಕ್ತ -ನವೀನ್ ಭಟ್ ಇಳಂತಿಲ