ಮಂಗಳೂರು: ಗಿರಿಗಿಟ್ ಚಿತ್ರದಲ್ಲಿ ನ್ಯಾಯಾಂಗ ನಿಂದನೆ, ವಕೀಲರ ಅವಹೇಳನ, ವಕೀಲರ ಸಂಘದ ಅಕ್ರೋಶ, ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ, ಕಿರಿಯ ಪ್ರಧಾನ ಸಿವಿಲ್ ನ್ಯಾಯಾಧೀಶರ ಆದೇಶದ ಕುರಿತು ಮಂಗಳೂರು ವಕೀಲರ ಸಂಘದ ವತಿಯಿಂದ ಸುದ್ದಿಗೋಷ್ಠಿಯು ಸಂಘದ ಕಾರ್ಯಾಲಯದಲ್ಲಿ ನಡೆಯಿತು.
ಗಿರಿಗಿಟ್ ತುಳು ಚಲನಚಿತ್ರಕ್ಕೆ ಕೋರ್ಟ್ ನೀಡಿದ ತಡೆಯಾಜ್ಞೆ ನೀಡಿದ ಆದೇಶದ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಮಂಗಳೂರು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ವಿ. ರಾಘವೇಂದ್ರ ಇಂತಹ ಮಾನ ಹಾನಿಕರ ಸನ್ನಿವೇಶಗಳ ಚಿತ್ರೀಕರಣದ ಬಗ್ಗೆ ಮಂಗಳೂರು ವಕೀಲರ ಸಂಘವು ತೀವ್ರ ಹೋರಾಟ ನಡೆಸುವುದಾಗಿ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ
ಸುದ್ದಿಗೋಷ್ಠಿಯಲ್ಲಿ ಸಂಘದ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಶ್ರೀ ಎಂ.ಪಿ. ಶೆಣೈ, ವಕೀಲರ ಸಂಘದ ಅಧ್ಯಕ್ಷ ಶ್ರೀ ಎನ್. ನರಸಿಂಹ ಹೆಗ್ಡೆ, ಉಪಾಧ್ಯಕ್ಷ ಜಿನೇಂದ್ರ ಕುಮಾರ್, ಜೊತೆ ಕಾರ್ಯದರ್ಶಿ ಶರ್ಮಿಳಾ, ಕೋಶಾಧಿಕಾರಿ ಅರುಣಾ ಬಿ.ಪಿ. ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಚಿತ್ರದಲ್ಲಿ ನ್ಯಾಯಾಂಗ ಮತ್ತು ವಕೀಲರಿಗೆ ಅವಮಾನ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ವಕೀಲರ ಸಂಘ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದು, ಕಿರಿಯ ಪ್ರಧಾನ ಸಿವಿಲ್ ನ್ಯಾಯಾಲಯ ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ ನೀಡಿದೆ.
ವಕೀಲರ ಸಂಘದ ಪರವಾಗಿ ಹಿರಿಯ ವಕೀಲ ಎಂ.ಪಿ ಶೆಣೈ ವಾದ ಮಂಡಿಸಿದ್ದು, ಕಿರಿಯ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಹರೀಶ್ ಅವರು ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ ನೀಡಿದ್ದಾರೆ.