Advertisement

Mangaluru; ಆರನೇ ಮಹಡಿಯಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

12:57 PM Nov 13, 2023 | Team Udayavani |

ಮಂಗಳೂರು: ಜೀವನದಲ್ಲಿ ಜಿಗುಪ್ಸೆಗೊಂಡು ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಸೋಮವಾರ ಮುಂಜಾನೆ ನಡೆದಿದೆ.

Advertisement

ನಗರದ ಎಜೆ ಸಂಸ್ಥೆಯ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20 ವರ್ಷ) ಮೃತಪಟ್ಟವರು. ಸೋಮವಾರ ಮುಂಜಾನೆ 3 ಗಂಟೆಗೆ ಮಹಿಳಾ ಹಾಸ್ಟೆಲ್‌ ನಲ್ಲಿ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಜೀವನದಲ್ಲಿ ಹತಾಶೆಗೊಂಡು ಈ ಕೃತ್ಯ ನಡೆಸಿರುವುದಾಗಿ ಬರೆಯಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next