Advertisement

Mangaluru ಎಂಡಿಎಂಎ ಡ್ರಗ್ಸ್ ಮಾರಾಟ: ಓರ್ವನ ಬಂಧನ

09:20 PM Sep 12, 2023 | Team Udayavani |

ಮಂಗಳೂರು: ಮಂಗಳೂರು ನಗರದಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಎಂಡಿಎಂಎ ಸಿಂಥೆಟಿಕ್‌ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಉಳ್ಳಾಲ ಮುಕ್ಕಚೇರಿ ಒಂಭತ್ತುಕೆರೆ ನಿವಾಸಿ ಅಬ್ದುಲ್‌ ಸವಾಜ್‌ ಆಲಿಯಾಸ್‌ ಚವ್ವಾ(30)ನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Advertisement

ಒಂಭತ್ತು ಕೆರೆ ಪರಿಸರದಲ್ಲಿ ದ್ವಿಚಕ್ರ ವಾಹನವೊಂದರಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಆತನ ವಶದಲ್ಲಿದ್ದ ಒಟ್ಟು 25 ಗ್ರಾಂ ತೂಕದ 1,25,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಹೋಂಡಾ ಆಕ್ಟಿವಾ ಸ್ಕೂಟಿ, ಮೊಬೈಲ್‌ ಫೋನ್‌, 2,120 ರೂ. ನಗದು, ಡಿಜಿಟಲ್‌ ತೂಕ ಮಾಪನ ಸಹಿತ ಒಟ್ಟು 2,17,000 ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಆರೋಪಿ ವಿರುದ್ಧ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್ವಾಲ್‌ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next