Advertisement

Mangaluru ಎಂಡಿಎಂಎ ಮಾರಾಟ: ಆರೋಪಿಯ ಬಂಧನ

10:10 PM Feb 23, 2024 | Team Udayavani |

ಮಂಗಳೂರು: ಮಾದಕ ವಸ್ತುವಾದ ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ನಗರ ಅಪರಾಧ ಪತ್ತೆದಳದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

Advertisement

ಮೂಡುಶೆಡ್ಡೆಯ ಮೊಹಮ್ಮದ್‌ ರಿಜ್ವಾನ್‌ (34) ಬಂಧಿತ ಆರೋಪಿ.

ಪಡುಶೆಡ್ಡೆ ಗ್ರಾಮದ ಬೊಂದೆಲ್‌ ಮೂಡುಶೆಡ್ಡೆ ರಸ್ತೆಯಲ್ಲಿರುವ ರೈಲ್ವೇ ಅಂಡರ್‌ಪಾಸ್‌ ಬಳಿಯಲ್ಲಿ ಒಬ್ಬ ವ್ಯಕ್ತಿ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆಂಬ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದರು.

ಆರೋಪಿಯಿಂದ 75,000 ರೂ. ಮೌಲ್ಯದ 15 ಗ್ರಾಂ ನಿಷೇಧಿತ ಎಂಡಿಎಂಎ, ಡಿಜಿಟಲ್‌ ತೂಕ ಮಾಪನ, ಮೊಬೈಲ್‌ ಫೋನ್‌ ಹಾಗೂ ಆಟೋರಿಕ್ಷಾ ಸೇರಿದಂತೆ ಒಟ್ಟು 91,280 ರೂ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಈತನ ಮೇಲೆ ಈ ಹಿಂದೆ ಮಂಗಳೂರು ನಗರದ ಕಾವೂರು, ಮಂಗಳೂರು ಗ್ರಾಮಾಂತರ, ಕೊಣಾಜೆ ಠಾಣೆ ಹಾಗೂ ಉಡುಪಿ ಜಿಲ್ಲೆಯ ಕೊಲ್ಲೂರು ಪೊಲೀಸ್‌ ಠಾಣೆಗಳಲ್ಲಿ ಕೊಲೆ, ದರೋಡೆ, ಹಲ್ಲೆ, ಮಾದಕ ವಸ್ತು ಸೇವನೆ ಪ್ರಕರಣಗಳು ದಾಖಲಾಗಿದ್ದವು.

Advertisement
Advertisement

Udayavani is now on Telegram. Click here to join our channel and stay updated with the latest news.

Next