ಮಂಗಳೂರು: ಮಹಿಳಾ ಸಹೋದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವೈದ್ಯಾಧಿಕಾರಿ ಡಾ. ರತ್ನಾಕರ್ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಡಾ. ರತ್ನಾಕರ್ ಮಹಿಳಾ ಸಹೋದ್ಯೋಗಿಗಳಿಗೆ ಕಿರುಕುಳ ನೀಡುತ್ತಿರುವ ವಿಡಿಯೋ ಮತ್ತು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.
ಸುದ್ದಿಗಾರರೊಂದಿಗೆ ಮಾತನಾಡಿದ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಶುಕ್ರವಾರ ಇಲ್ಲಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಡಾ.ರತ್ನಾಕರ್ ನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಅಧಿಕಾರಿಯಿಂದ ಕಿರುಕುಳಕ್ಕೊಳಗಾದ ಮಹಿಳೆಯರು ದೂರು ನೀಡಲು ನಿರಾಕರಿಸಿದ್ದು, ತನಿಖೆಯ ಸಮಯದಲ್ಲಿ ಮಹಿಳೆಯರು ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದರು.
ಇದೇ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಕಾರ್ಯಕ್ರಮ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯಾಧಿಕಾರಿ ಡಾ. ರತ್ನಾಕರ್ ರನ್ನು ಅಮಾನತುಗೊಳಿಸಲಾಗಿದೆ.
ನವೆಂಬರ್ 8 ರಿಂದ ರತ್ನಾಕರ್ ಅವರನ್ನು ಅಮಾನತುಗೊಳಿಸಲಾಗಿದೆ ಆರೋಗ್ಯ ಇಲಾಖೆಯಿಂದ ಇಲಾಖಾ ತನಿಖೆ ನಡೆಸಲಾಗುತ್ತಿದೆ ಎಂದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.