Advertisement

Mangaluru: ಸಚಿವ ನಾಗೇಂದ್ರ ಪ್ರಗತಿ ಪರಿಶೀಲನೆ

11:50 PM Jan 13, 2024 | Team Udayavani |

ಮಂಗಳೂರು: ಮಂಗಳೂರು ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಇಲಾಖೆ ಮತ್ತು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಒಟ್ಟು ಮೂರು ಇಲಾಖೆಯ ಹಿರಿಯ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಅಧಿಕಾರಿಗಳೊಂದಿಗೆ ಯುವ ಸಬಲೀಕರಣ, ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಶನಿವಾರ ಸಭೆ ನಡೆಸಿದರು.

Advertisement

ಜಿಲ್ಲೆಯಲ್ಲಿ ಆಗಿರುವ ಅಭಿವೃದ್ಧಿ ಕಾಮಗಾರಿಗಳು, ಅನುದಾನದ ವಿವರಗಳ ಬಗ್ಗೆ ಚರ್ಚಿಸಲಾಯಿತು.

ಜಿ.ಪಂ. ಸಿಇಒ ಡಾ| ಆನಂದ್‌. ಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಶಶಿಕುಮಾರ್‌, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಕಲ್ಲೇಶ್‌, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಜೆ.ಜೆ. ಪದ್ಮನಾಭ, ಪ್ರಧಾನ ವ್ಯವಸ್ಥಾಪಕ ರಾಜಶೇಖರ್‌ ಎ. ಮುಂತಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next