Advertisement
ನವದೆಹಲಿಯಲ್ಲಿ ಇಂದು ಸಂಸದ ಕ್ಯಾ. ಚೌಟ ಅವರು, ಸಚಿವರನ್ನು ಖುದ್ದು ಭೇಟಿ ಮಾಡಿ ಮಂಗಳೂರು ವಿಮಾನ ನಿಲ್ದಾಣದ ಪ್ರಯಾಣಿಕರು ಹಾಗೂ ಕಾರ್ಗೋ ನಿರ್ವಹಣೆ ಸಾಮರ್ಥ್ಯಕ್ಕೆ ಅನುಗುಣವಾಗಿ ಹೆಚ್ಚಿನ ಸಂಖ್ಯೆಯ ವಿದೇಶಿ ನೇರ ಸಂಪರ್ಕದ ವಿಮಾನ ಸೇವೆ ಆರಂಭಿಸುವ ವಿಚಾರವಾಗಿ ಮಾತುಕತೆ ನಡೆಸಿದರು. ಜತೆಗೆ, ಕರಾವಳಿ ಭಾಗದ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ʼಪಾಯಿಂಟ್ ಆಫ್ ಕಾಲ್ ಸ್ಟೇಟಸ್ʼ ಮನ್ನಣೆ ನೀಡುವುದರಿಂದ ಆರ್ಥಿಕ, ಸಾಮಾಜಿಕವಾಗಿ ಏನೆಲ್ಲಾ ಅನುಕೂಲವಾಗಲಿದೆ ಎಂಬ ಬಗ್ಗೆ ಸಚಿವರಿಗೆ ಸಂಸದರು ಇದೇ ವೇಳೆ ಮನವರಿಕೆ ಮಾಡಿದ್ದಾರೆ. ಜೊತೆಗೆ ಮಂಗಳೂರು ವಿಮಾನ ನಿಲ್ದಾಣದ ವಿಸ್ತರಣೆ ಮತ್ತು ಹೆಚ್ಚುವರಿ ವಿಮಾನ ಮಾರ್ಗದ ಸೌಲಭ್ಯವನ್ನು ಒದಗಿಸುವುದರ ಕುರಿತು ಕೂಡ ಚರ್ಚೆ ನಡೆಸಿದ್ದಾರೆ.
Related Articles
Advertisement
ವಿಮಾನಯಾನ ಸೇವಾ ಒಪ್ಪಂದಗಳ ಪ್ರಕಾರ, ಅಂತರರಾಷ್ಟ್ರೀಯ ವಿಮಾನಗಳು ನಿರ್ದಿಷ್ಟ ವಿಮಾನ ನಿಲ್ದಾಣಗಳಿಗೆ ನೇರವಾಗಿ ಹಾರಾಟ ನಡೆಸಬಹುದು. ಇವುಗಳನ್ನು ‘ಪಿಒಸಿ’ ಎಂದು ಕರೆಯಲಾಗುತ್ತದೆ. ಈ ವ್ಯವಸ್ಥೆಯಿಂದ ವಿವಿಧ ದೇಶಗಳ ನಡುವೆ ನೇರ ವಿಮಾನ ಸಂಪರ್ಕ ಸುಧಾರಿಸುತ್ತದೆ. ಪ್ರಯಾಣಿಕರಿಗೆ ಹೆಚ್ಚು ಆಯ್ಕೆಗಳು ಮತ್ತು ಅನುಕೂಲತೆ ದೊರೆಯುತ್ತದೆ.
ವಿದೇಶಾಂಗ ಸಚಿವರ ಭೇಟಿ:ಕೇಂದ್ರ ವಿದೇಶಾಂಗ ಸಚಿವ ಡಾ. ಜೈ ಶಂಕರ್ ಅವರನ್ನು ಸಂಸದ ಕ್ಯಾ. ಚೌಟ ಗುರುವಾರ ಭೇಟಿ ಮಾಡಿದ್ದು ಈ ವೇಳೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು. ವಿಶ್ವದ ವಿವಿಧ ಭಾಗಗಳಲ್ಲಿ ವಾಸಿಸುವ ಕರಾವಳಿ ಮೂಲದ ಎನ್ಆರ್ಐ ಎದುರಿಸುತ್ತಿರುವ ಸಮಸ್ಯೆಯ ಕುರಿತು ಸಚಿವರ ಗಮನ ಸೆಳೆದರು. ಈ ಸಂದರ್ಭದಲ್ಲಿ, ಸಂಸದರು ಕರಾವಳಿಯ ಸಂಸ್ಕೃತಿಯ ಪ್ರತೀಕವಾಗಿರುವ ಕಂಬಳ ಕ್ರೀಡೆಯ ಸುಂದರ ಫೋಟೋ ಫ್ರೇಮ್ ಅನ್ನು ಸಚಿವರಿಗೆ ಉಡುಗೊರೆಯಾಗಿ ನೀಡಿದರು. ಇದನ್ನೂ ಓದಿ: Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್