Advertisement
ದೂರುಗಳು ಬಂದ ಹಿನ್ನೆಲೆಯಲ್ಲಿ ಮಾ. 13ರಂದು ದಾಳಿ ನಡೆಸಿ 16 ತಾಸು ಕಾಲ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಕಚೇರಿಯ ಅಧಿಕಾರಿಗಳಲ್ಲಿ ಮತ್ತು ಹಲವಾರು ವ್ಯಕ್ತಿ ಗಳಲ್ಲಿ ದೊಡ್ಡ ಮೊತ್ತದ ಹಣವಿತ್ತು.ಆ ಬಗ್ಗೆ ಸೂಕ್ತ ಉತ್ತರ ದೊರೆತಿಲ್ಲ. ಅಲ್ಲದೆ ಕಚೇರಿಯಲ್ಲಿ ಹಣದ ಬ್ಯಾಗ್ ಕೂಡ ಪತ್ತೆಯಾಗಿದೆ ಎಂದವರು ತಿಳಿಸಿದ್ದಾರೆ.
ಪರಿಶೀಲನೆ ವೇಳೆ ಸಾರ್ವಜನಿಕರು ಮುಡಾ ಕಚೇರಿಯಲ್ಲಿ ನಡೆಯು ತ್ತಿರುವ ಭ್ರಷ್ಟಾಚಾರದ ಕುರಿತು ಹಾಗೂ ಕಚೇರಿಯಲ್ಲಿ ಅಧಿಕಾರಿಗಳು ನೀಡುತ್ತಿರುವ ಕಿರುಕುಳ ಕುರಿತು ಹೇಳಿಕೊಂಡಿದ್ದಾರೆ. ಪರಿಶೀಲನೆ ಸಂದರ್ಭ ದೀರ್ಘಕಾಲದಿಂದ ವಿಲೇವಾರಿಯಾಗದ ಹಲವಾರು ಅರ್ಜಿದಾರರ ಕಡತಗಳು ಸಿಕ್ಕಿವೆ. ಅಧಿಕಾರಿಗಳು ಬ್ರೋಕರ್‌ಗಳೊಡನೆ ಫೋನ್ ಮುಖಾಂತರ ಹೊಂದಾಣಿಕೆ ಮಾಡಿಕೊಂಡು ಕಡತ ವಿಲೇವಾರಿ ಮಾಡುತ್ತಿರುವುದಕ್ಕೆ ಸಾಕ್ಷಿ ದೊರೆತಿದೆ. ಈ ಜಾಲಗಳ ಬ ಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಸೈಮನ್ ಅವರ ಮಾರ್ಗದರ್ಶನದಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಚೆಲುವರಾಜು ಬಿ., ಡಾ| ಗಾನ ಪಿ. ಕುಮಾರ್, ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ ಎ., ಸುರೇಶ್ ಕುಮಾರ್ ಪಿ. ಮತ್ತು ಸಿಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.