Advertisement
ಈ ವೇಳೆ ಮಾತನಾಡಿದ ಸಂಸದರು, ಪ್ರಧಾನ ಮಂತ್ರಿ ಸ್ಕೂಲ್ ಫಾರ್ ರೈಸಿಂಗ್ ಇಂಡಿಯಾ(ಪಿಎಂಶ್ರೀ) ಯೋಜನೆಯಡಿ ಮುಡಿಪುವಿನ ಜವಾಹರ್ ನವೋದಯ ವಿದ್ಯಾಲಯ ಶಾಲೆ ಆಯ್ಕೆಯಾಗಿರುವುದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆಯ ಸಂಗತಿ ಎಂದು ಹೇಳಿದರು. ಮುಖ್ಯಶಿಕ್ಷಕ ರಾಜೇಶ್, ಪ್ರಮುಖರಾದ ಸಂತೋಷ್ ಬೋಳಿಯಾರ್, ಜಗದೀಶ್ ಆಳ್ವ, ಶಿಕ್ಷಕರು ಉಪಸ್ಥಿತರಿದ್ದರು.
ಪಿಎಂ ಶ್ರೀ ಕೇಂದ್ರ ಪ್ರಾಯೋಜಿತ ಯೋಜನೆಯಾಗಿದ್ದು, ದೇಶಾದ್ಯಂತ 14,500ಕ್ಕೂ ಹೆಚ್ಚು ಶಾಲೆಗಳನ್ನು ಅಭಿವೃದ್ಧಿಪಡಿಸುವ ಮೂಲಕ ಮೇಲ್ದರ್ಜೆಗೇರಿಸುವುದು ಈ ಯೋಜನೆಯ ಉದ್ದೇಶ. ಇವುಗಳು ಮಾದರಿ ಶಾಲೆಗಳಾಗಲಿದ್ದು, ಸುತ್ತಮುತ್ತ ಶಾಲೆಗಳಿಗೆ ಪ್ರೇರಣೆ ಹಾಗೂ ಮಾರ್ಗದರ್ಶನ ಒದಗಿಸಲಿವೆ. ಸುಸಜ್ಜಿತ ಪ್ರಯೋಗಾಲಯಗಳು, ಸ್ಮಾರ್ಟ್ ಕ್ಲಾಸ್ ರೂಂ, ಗ್ರಂಥಾಲಯಗಳು, ಕ್ರೀಡಾ ಸಲಕರಣೆ, ಕಲಾ ಕೊಠಡಿ ಮುಂತಾದ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.