Advertisement

Mangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ

12:19 AM Sep 30, 2023 | Team Udayavani |

ಕಾರ್ಕಳ: ಮಂಗಳೂರು-ಮುಂಬಯಿ ನಡುವೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರ ಆರಂಭಿಸುವಂತೆ ಸಂಸದರ ಮೂಲಕ ಕೇಂದ್ರ ಸಚಿವರಿಗೆ ಶಾಸಕ ವಿ. ಸುನಿಲ್‌ ಕುಮಾರ್‌ ಪತ್ರದ ಮೂಲಕ ಮನವಿ ಮಾಡಿದ್ದಾರೆ.

Advertisement

ಕರಾವಳಿಯ ಜನತೆ ವ್ಯಾಪಾರ, ವ್ಯವಹಾರ, ಆರ್ಥಿಕ ಚಟುವಟಿಕೆ ಸಹಿತ ವಿವಿಧ ಕ್ಷೇತ್ರಗಳಲ್ಲಿ ಮುಂಬಯಿನೊಂದಿಗೆ ನಿಕಟ ಸಂಪರ್ಕ ಹೊಂದಿದ್ದು ಪ್ರತಿನಿತ್ಯ ನೂರಾರು ಜನರು ಮುಂಬಯಿಗೆ ಸಂಚರಿಸುತ್ತಿದ್ದಾರೆ.

ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಆರಂಭಿಸುವುದರಿಂದ ಪ್ರಯಾಣದ ಅವಧಿ ಹಾಗೂ ಆರ್ಥಿಕ ಹಿತದೃಷ್ಟಿಯಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಹೊಸ ರೈಲು ಆರಂಭಿಸುವಂತೆ ಅವರು ಮನವಿಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next