Advertisement
ಇದೇ ವೇಳೆ ಹಿರಿಯ ಅಧಿಕಾರಿ ಗಳಿಗೆ ಯಾವುದೇ ಮಾಹಿತಿಯನ್ನು ನೀಡದೆ ಸುಮೋಟೊ ಪ್ರಕರಣ ದಾಖಲಿಸಿದ ಕದ್ರಿ ಪೊಲೀಸ್ ನಿರೀಕ್ಷಕ ಸೋಮಶೇಖರ್‌ರವರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಿ ಎಸಿಪಿ ದರ್ಜೆಯ ಅಧಿಕಾರಿಯನ್ನು ವಿಚಾರಣೆಗೆ ನೇಮಕ ಮಾಡಲಾಗಿದೆ.
ನಮಾಜ್ ವೀಡಿಯೋ ವೈರಲ್ ಆದ ಮೇಲೆ ಹೇಳಿಕೆ ನೀಡಿದ್ದ ವಿಶ್ವ ಹಿಂದೂ ಪರಿಷತ್ ವಿಭಾಗ ಸಹ ಸಂಚಾಲಕ ಶರಣ್ ಪಂಪ್‌ವೆಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮತ್ತೆ ಅದೇ ಜಾಗದಲ್ಲಿ ನಮಾಜ್ ನಡೆದರೆ ನೇರವಾಗಿ ಬಜರಂಗದಳ ಇದರ ವಿರುದ್ಧ ನೇರ ಕಾರ್ಯಾಚರಣೆ ನಡೆಸಿ ನಿಲ್ಲಿಸಲಿದೆ ಎಂಬುದಾಗಿ ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ ಎಂಬ ಬರವಣಿಗೆಯೊಂದಿಗೆ ಶರಣ್ ಪೋಸ್ಟ್ ಮಾಡಿದ್ದು ಈ ಮೂಲಕ ಜನರಲ್ಲಿ ದ್ವೇಷ ಭಾವನೆ ಉಂಟಾಗುವಂತೆ ಹಾಗೂ ಕಾನೂನನ್ನು ಕೈಗೆತ್ತಿಕೊಳ್ಳುವ ಬೆದರಿಕೆ ಹಾಕಿ ಸಮಾಜದಲ್ಲಿ ಭಯವನ್ನುಂಟು ಮಾಡುವ ರೀತಿಯಲ್ಲಿ ಪೋಸ್ಟನ್ನು ಮಾಡಿದ್ದಾರೆ. ಈ ಬಗ್ಗೆ ಮಂಗಳೂರು ನಗರದಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟಾಗುವ ಸಾದ್ಯತೆ ಇರುವುದರಿಂದ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.