ಮಂಗಳೂರು: ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನನ್ನು ಹಾಗೂ ಆತನಲ್ಲಿದ್ದ 10 ಕೆ.ಜಿ. ಗಾಂಜಾ ವಶ ಪಡಿಸಿಕೊಂಡ ಘಟನೆ ನಗರದಲ್ಲಿ ನಡೆಯಿತು.
ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ವಿಜಯ ಕುಮಾರ್ ಶೆಟ್ಟಿ (24) ಬಂಧಿತ ಆರೋಪಿ.
ಜ. 13 ರ ಬೆಳಿಗ್ಗೆ ಮಂಗಳೂರು ನಗರದ ಕುಂಟಿಕಾನ ಕ್ರಾಸ್ ಬಳಿಯಲ್ಲಿ ಮಾರುತಿ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಮಾದಕ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ರವರ ನೇತ್ರತ್ವದ ಸಿಸಿಬಿ ಪೊಲೀಸರು ಗಾಂಜಾವನ್ನು ಹೊಂದಿದ ಕಾರನ್ನು ಪತ್ತೆ ಹಚ್ಚಿ, ಆಂಧ್ರಪ್ರದೇಶದಿಂದ ಬೆಂಗಳೂರು ಮೂಲಕ ಮಂಗಳೂರಿಗೆ ಕಾರಿನಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿದ್ದವನನ್ನು ದಸ್ತಗಿರಿ ಮಾಡಿ ಸಾಗಾಟಕ್ಕೆ ಉಪಯೋಗಿಸಿದ ಕಾರು ಸಹಿತ 10,200 ಕೆಜಿ ಗಾಂಜಾವನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈತನನ್ನು ವಶಕ್ಕೆ ಪಡೆದು ಸುಮಾರು 2,55,-ರೂಪಾಯಿ ಮೌಲ್ಯದ 10,200 ಕೆ.ಜಿ. ಗಾಂಜಾ, ಮಾರುತಿ ಸ್ವಿಪ್ಟ್ ಕಾರು, ಮೊಬೈಲ್ ಫೋನ್-1, ನಗದು ರೂ.500/- ನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಅಂದಾಜು ಒಟ್ಟು ಮೌಲ್ಯ ರೂ. 5,65,500/-ಆಗಬಹುದು. ಈ ಬಗ್ಗೆ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ವಿಜಯ ಕುಮಾರ್ ಎಂಬಾತನು ಈ ಹಿಂದೆ ಕೂಡಾ ಗಾಂಜಾ ಸಾಗಾಟ/ಮಾರಾಟ ಪ್ರಕರಣದಲ್ಲಿ ಭಾಗಿಯಾಗಿದ್ದು, ಈತನ ವಿರುದ್ಧ ಚಿಕ್ಕಮಗಳೂರಿನಲ್ಲಿ ಹಾಗೂ ಉಡುಪಿಯಲ್ಲಿ ಒಟ್ಟು 2 ಪ್ರಕರಣ ದಾಖಲಾಗಿದ್ದು, ಸುಮಾರು 3 ತಿಂಗಳ ಹಿಂದೆ ಕಾರಾಗೃಹದಿಂದ ಬಿಡುಗಡೆಗೊಂಡಿದ್ದನು.
ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ಮಹೇಶ್ ಪ್ರಸಾದ್, ಪಿಎಸ್‌ಐ ಯವರಾದ ರಾಜೇಂದ್ರ ಬಿ, ಸುದೀಪ್ ಎಂ ವಿ ಹಾಗೂ ಸಿಸಿಬಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.