Advertisement
ಸ್ಫೋಟ ನಡೆದ ಸ್ಥಳದಲ್ಲಿ ಪ್ರೇಮರಾಜ ಹುಟಗಿ ಹೆಸರು ಮತ್ತು ವಿಳಾಸವಿದ್ದ ಆಧಾರ್ ಕಾರ್ಡ್ ದೊರೆತಿತ್ತು. ಇದಕ್ಕೆ ಸಂಬಂಧಿಸಿ ಅವರ ಪೋಷಕರನ್ನು ಸ್ಥಳೀಯ ಪೊಲೀಸರು ವಿಚಾರಣೆ ಮಾಡಿದ್ದಾರೆ. ಪ್ರೇಮರಾಜ್ ರೈಲ್ವೇ ಇಲಾಖೆಯ ಡಿ ಗ್ರೂಪ್ ಉದ್ಯೋಗಿಯಾಗಿದ್ದು, ಕಳೆದ ಮೂರು ವರ್ಷದಿಂದ ತುಮಕೂರಿನಲ್ಲಿ ಟ್ರಾಕ್ ಮೆಂಟೇನರ್ ಆಗಿ ಕೆಲಸ ಮಾಡುತ್ತಿದ್ದಾರೆ. ಅವರ ಪೋಷಕರು ಹುಬ್ಬಳ್ಳಿಯ ಕೇಶ್ವಾಪುರದ ಮಧುರಾ ಕಾಲೋನಿ ನಿವಾಸಿಯಾಗಿದ್ದಾರೆ. ಪ್ರೇಮರಾಜ ಅವರ ತಂದೆ ಮಾರುತಿ ಹುಟಗಿ, ತಾಯಿ ರೇಖಾ ಹಾಗೂ ಸಹೋದರ ನವರಾಜ ಅವರನ್ನು ಶನಿವಾರ ರಾತ್ರಿಯೇ ಪೊಲೀಸರು ವಿಚಾರಣೆ ನಡೆಸಿ, ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.
ತುಮಕೂರು, ನ. 20: ಮಂಗಳೂರಿನಲ್ಲಿ ಆಟೋ ರಿಕ್ಷಾದೊಳಗೆ ಕುಕ್ಕರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನ ಸ್ಥಳದಲ್ಲಿ ಸಿಕ್ಕಿರುವ ನಕಲಿ ಆಧಾರ್ ಕಾರ್ಡ್‌ನ ಅಸಲಿ ವ್ಯಕ್ತಿ ತುಮಕೂರಿನಲ್ಲಿ ಪತ್ತೆಯಾಗಿದ್ದಾರೆ.
Related Articles
Advertisement
2 ಬಾರಿ ಆಧಾರ್ ಕಳೆದುಕೊಂಡಿದ್ದೆತುಮಕೂರು ಸಮೀಪದ ಹಿರೇಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಪ್ರೇಮರಾಜ್ ಹುಟಗಿ, ಕಳೆದ ಎರಡು ವರ್ಷದಲ್ಲಿ 2 ಬಾರಿ ಆಧಾರ್ ಕಾರ್ಡ್ ಕಳೆದುಕೊಂಡಿರುವುದಾಗಿ ತಿಳಿಸಿದ್ದಾನೆ. ಧಾರವಾಡದಿಂದ ಬೆಳಗಾವಿಗೆ ಬಸ್‌ನಲ್ಲಿ ಬರುವಾಗ ಕಳೆದುಕೊಂಡಿದ್ದ. ಬಳಿಕ ಮತ್ತೂಂದು ಆಧಾರ್ ಕಾರ್ಡ್ ಪಡೆದಿದ್ದ. ಕಳೆದ ಆರು ತಿಂಗಳ ಹಿಂದೆ ಹುಬ್ಬಳ್ಳಿಯಿಂದ ಬಸ್‌ನಲ್ಲಿ ಬರುವಾಗ ಮತ್ತೂಮ್ಮೆ ಕಳೆದುಕೊಂಡಿರುವುದಾಗಿ ತಿಳಿಸಿದ್ದಾನೆ. ಶನಿವಾರ ರಾತ್ರಿ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಕರೆ ಮಾಡಿ ಕೂಡಲೇ ತುಮಕೂರು ಎಸ್‌ಪಿ ಸಂಪರ್ಕಿಸುವಂತೆ ಸೂಚನೆ ನೀಡಿದ್ದರು. ಅದರಂತೆ ರವಿವಾರ ಎಸ್‌ಪಿ ರಾಹುಲ್ ಕುಮಾರ್ ಶಹಪುರ್ ವಾಡ್ ಅವರನ್ನು ಪ್ರೇಮರಾಜ್ ಹುಟಗಿ ಸಂಪರ್ಕಿಸಿದ್ದಾನೆ.