Advertisement

Mangaluru: ಕೆಲ ದಿನಗಳ ಹಿಂದೆಯಷ್ಟೇ ಕಾಲೇಜಿಗೆ ಸೇರಿದ್ದ ನರ್ಸಿಂಗ್ ವಿದ್ಯಾರ್ಥಿ ಆತ್ಮಹತ್ಯೆ

07:10 PM Dec 11, 2023 | Team Udayavani |

ಮಂಗಳೂರು: ಕಾಲೇಜಿನ ಹಾಸ್ಟೆಲ್ ನಲ್ಲೇ ನರ್ಸಿಂಗ್ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

Advertisement

ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ಕೇರಳದ ಅಲೆಪ್ಪಿ ನಿವಾಸಿಯಾದ ಸಚಿನ್ ಸಜು (19 ವರ್ಷ) ಎನ್ನಲಾಗಿದೆ.

ಸಚಿನ್ ಪ್ರಥಮ ವರ್ಷದ ನರ್ಸಿಂಗ್ ವಿದ್ಯಾರ್ಥಿಯಾಗಿದ್ದು ಕಳೆದ ತಿಂಗಳಷ್ಟೇ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪ್ರವೇಶ ಪಡೆದಿದ್ದ ಎನ್ನಲಾಗಿದೆ. ಎರಡು ದಿನಗಳಿಂದ ಅರೋಗ್ಯ ಸಮಸ್ಯೆಯಿಂದಾಗಿ ತರಗತಿಗೆ ಹಾಜರಾಗಿರಲಿಲ್ಲ ಆದರೆ ಡಿಸೆಂಬರ್ 8 ರಂದು ಹಾಸ್ಟೆಲ್ ರೂಮ್ ನಲ್ಲಿ ಯಾರು ಇಲ್ಲದ ವೇಳೆ ಬೆಡ್‌ಶೀಟ್ ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಘಟನೆ ಸಂಬಂಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next