Advertisement

Mangaluru: ಅ.3ರಿಂದ ಮಂಗಳೂರು ದಸರಾ: ಪೂಜಾರಿ

12:39 AM Oct 01, 2024 | Team Udayavani |

ಮಂಗಳೂರು: “ಮಂಗಳೂರು ದಸರಾ’ ಎಂದೇ ಜನಜನಿತವಾಗಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿ ಮಹೋತ್ಸವ ಅ.3ರಿಂದ ಅ. 14ರ ವರೆಗೆ ವಿಜೃಂಭಣೆಯಿಂದ ನೆರವೇರಲಿದೆ ಎಂದು ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಹೇಳಿದರು.

Advertisement

ಕುದ್ರೋಳಿ ದೇವಸ್ಥಾನದ ಸಭಾಂಗಣದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್‌ ಆರ್‌. ಮಾತನಾಡಿ, ದಸರಾ ಮಹೋತ್ಸವವನ್ನು ಜನಾರ್ದನ ಪೂಜಾರಿ ಅವರು ಉದ್ಘಾಟಿಸಲಿದ್ದಾರೆ. ಅ.3ರಂದು ಬೆಳಗ್ಗೆ 8.30ಕ್ಕೆ ನವದುರ್ಗೆಯರ ಮತ್ತು ಶಾರದಾ ಪ್ರತಿಷ್ಠೆ ಮೂಲಕ ದಸರಾ ಉದ್ಘಾಟನೆ ನಡೆಯಲಿದೆ. ದಸರಾ ಸಂದರ್ಭ ಪ್ರತಿದಿನ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದರು.

ದಸರಾ ಪ್ರಯುಕ್ತ ಕಳೆದ ವರ್ಷ ವಾಕಥಾನ್‌ ನಡೆಸಲಾಗಿದ್ದು, ಈ ಬಾರಿ ಅ. 6ರಂದು ಬೆಳಗ್ಗೆ 5.30ಕ್ಕೆ ಕ್ಷೇತ್ರದಿಂದ 21 ಕಿ.ಮೀ.ಗಳ ಹಾಫ್ ಮ್ಯಾರಥಾನ್‌ ಆಯೋಜಿಸಲಾಗಿದೆ. ಇದರಲ್ಲಿ ದೇಶದ ವಿವಿಧ ಭಾಗಗಳಿಂದ 2,000ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಪದ್ಮರಾಜ್‌ ವಿವರಿಸಿದರು.

ದೇವಳ ಅಭಿವೃದ್ಧಿ ಸಮಿತಿ ಸದಸ್ಯ ಹರಿಕೃಷ್ಣ ಬಂಟ್ವಾಳ್‌ ಮಾತನಾಡಿ, ಮಂಗಳೂರು ದಸರಾ ಮಹೋತ್ಸವ ಹಾದು ಹೋಗುವ ರಸ್ತೆ ಸಹಿತ ನಗರದ ಕಟ್ಟಡಗಳನ್ನು ಅಲಂಕರಿಸುವ ಮೂಲಕ ಮಹೋತ್ಸವಕ್ಕೆ ಮತ್ತಷ್ಟು ವೈಭವ ನೀಡುವಂತೆ ಕೋರಿದರು.

Advertisement

ಕ್ಷೇತ್ರದ ಕಾರ್ಯದರ್ಶಿ ಮಾಧವ ಸುವರ್ಣ, ಟ್ರಸ್ಟಿಗಳಾದ ರವಿಶಂಕರ್‌ ಮಿಜಾರು, ಎಂ. ಶೇಖರ್‌ ಪೂಜಾರಿ, ಜಗದೀಪ್‌ ಡಿ.ಸುವರ್ಣ, ದೇಗುಲ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸಹ ಉಪಾಧ್ಯಕ್ಷೆ ಡಾ| ಅನಸೂಯಾ ಬಿ.ಟಿ.ಸಾಲ್ಯಾನ್‌, ಉಪಾಧ್ಯಕ್ಷ ಡಾ| ಬಿ.ಜಿ. ಸುವರ್ಣ, ಅಭಿವೃದ್ಧಿ ಸಮಿತಿ ಸದಸ್ಯರಾದ ಕಿಶೋರ್‌ ದಂಡೆಕೇರಿ, ವಾಸುದೇವ ಕೋಟ್ಯಾನ್‌, ಎಚ್‌.ಎಸ್‌. ಜೈರಾಜ್‌, ಲತೀಶ್‌ ಎಂ.ಸುವರ್ಣ, ರಾಧಾಕೃಷ್ಣ, ಲೀಲಾಕ್ಷ ಕರ್ಕೇರ, ಚಂದನ್‌ದಾಸ್‌, ಗೌರವಿ ರಾಜಶೇಖರ್‌, ಕೃತಿನ್‌ ಧೀರಜ್‌ ಅಮೀನ್‌ ಉಪಸ್ಥಿತರಿದ್ದರು.

ಅ.13: ಶೋಭಾಯಾತ್ರೆ
ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್‌.ಎಸ್‌. ಸಾಯಿರಾಂ ಮಾತನಾಡಿ, ವೈಭವದ ದಸರಾ ಸಂಭ್ರಮಕ್ಕೆ ಸರ್ವ ಸಿದ್ಧತೆ ನಡೆಸಲಾಗಿದೆ. ಅ.13ರಂದು ಸಂಜೆ 4ಕ್ಕೆ ಕುದ್ರೋಳಿ ಕ್ಷೇತ್ರದಿಂದ ಮಂಗಳೂರು ದಸರಾ ಬೃಹತ್‌ ಶೋಭಾಯಾತ್ರೆ ಆರಂಭವಾಗಲಿದೆ. ಕೇರಳದ ಚೆಂಡೆ ವಾದ್ಯ ಸಹಿತ ರಾಜ್ಯದ ವಿವಿಧ ಕಡೆಯಿಂದ ಆಗಮಿಸುವ ಜಾನಪದ, ಸಾಂಸ್ಕೃತಿಕ ಹಿನ್ನೆಲೆಯ ನೃತ್ಯ ತಂಡಗಳು, ವಿವಿಧ ಜಿಲ್ಲೆ, ರಾಜ್ಯಗಳ ಕಲಾ ತಂಡಗಳು, ಸ್ತಬ್ಧ ಚಿತ್ರಗಳು ಶೋಭಾಯತ್ರೆಗೆ ಮೆರುಗು ನೀಡಲಿವೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next