Advertisement

Mangaluru: ಸಹಾಯ ಮಾಡುವ ನೆಪದಲ್ಲಿ ಅತ್ಯಾ*ಚಾರ; ಪ್ರಕರಣ ದಾಖಲು

12:57 AM Dec 06, 2024 | Team Udayavani |

ಮಂಗಳೂರು: ಸಹಾಯ ಮಾಡುವ ನೆಪದಲ್ಲಿ ಜ್ಯೂಸ್‌ನಲ್ಲಿ ಮತ್ತು ಬರುವ ಔಷಧ ಬೆರೆಸಿ ಯುವಕನೋರ್ವ ತನ್ನ ಮೇಲೆ ಅತ್ಯಾಚಾರ ನಡೆಸಿರುವುದು ಮಾತ್ರವಲ್ಲದೆ, 62 ಸಾವಿರ ರೂ. ನಗದು ಕಳವು ಮಾಡಿದ್ದಾನೆ. ಆತನ ಅಣ್ಣನೂ ತನ್ನ ಲೈಂಗಿಕ ಕಿರುಕುಳ ನೀಡಿ ಮಾನಭಂಗಕ್ಕೆ ಯತ್ನಿಸಿರುವುದಾಗಿ ಯುವತಿಯೊಬ್ಬಳು ಕದ್ರಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

ಜು. 21ರಂದು ದೂರುದಾರ ಯುವತಿ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಕದ್ರಿಯಲ್ಲಿ ಕೆಟ್ಟು ಹೋಗಿದೆ. ಈ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಬೈಕ್‌ ಸವಾರ ಮೊಹಮ್ಮದ್‌ ಶಫಿನ್‌ ಕಾರನ್ನು ಸರಿಪಡಿಸಿ, ಬಳಿಕ ಆಕೆಯನ್ನು ಅದೇ ಕಾರಿನಲ್ಲಿ ಕೊಡಿಯಾಲಬೈಲಿನ ಅಪಾರ್ಟ್‌ಮೆಂಟ್‌ ಒಂದರಲ್ಲಿರುವ ಆಕೆಯ ಮನೆಗೆ ಬಿಟ್ಟು ಬಂದಿದ್ದ. ಈ ವೇಳೆ ಆತ ಆಕೆಯ ಮೊಬೈಲ್‌ ನಂಬರ್‌ ಪಡೆದಿದ್ದ.

ಆ. 8ರಂದು ಯುವತಿಯ ಮನೆಯ ಫ್ರಿಡ್ಜ್ ಕೆಟ್ಟು ಹೋಗಿದ್ದು, ಮನೆಯಲ್ಲಿ ಒಬ್ಬಳೇ ವಾಸವಿರುವುದರಿಂದ ಯುವತಿ ಸಹಾಯಕ್ಕಾಗಿ ಶಫಿನ್‌ಗೆ ಕರೆ ಮಾಡಿದ್ದಾಳೆ. ಆತ ತನ್ನ ಪರಿಚಿತ ರಿಪೇರಿಯವನನ್ನು ಯುವತಿಯ ಮನೆಗೆ ಕರೆದುಕೊಂಡು ಬಂದು ರಿಪೇರಿ ಮಾಡಿಸಿದ್ದ. ಬಳಿಕ ಎಲೆಕ್ಟ್ರಿಶಿಯನ್‌ನನ್ನು ಬಿಟ್ಟು ಬರುತ್ತೇನೆ ಎಂದು ಹೇಳಿ ಅಲ್ಲಿಯವರೆಗೆ ಫ್ರಿಡ್ಜ್ ಆನ್‌ ಮಾಡಬೇಡಿ ಎಂದು ಸೂಚಿಸಿದ್ದ. ಕೆಲವು ಹೊತ್ತಿನ ಬಳಿಕ ಶಫಿನ್‌ ವಾಪಸು ಬಂದಿದ್ದು, ಈ ವೇಳೆ ಹಣ್ಣು ಹಾಗೂ ಜ್ಯೂಸ್‌ ತಂದಿದ್ದ. ಜ್ಯೂಸ್‌ ಕುಡಿದ ಯುವತಿ ನಿದ್ದೆಗೆ ಜಾರಿದ್ದು, ಎಚ್ಚರಗೊಂಡಾಗ ಅನುಮಾನಗೊಂಡು ವಿಚಾರಿಸಿದಾಗ ಆತ ದೈಹಿಕ ಸಂಪರ್ಕ ನಡೆಸಿರುವುದಾಗಿ ತಿಳಿಸಿದ್ದ. ಜತೆಗೆ ಮುಂದೆಯೂ ಸಹಕರಿಸಬೇಕು. ಇಲ್ಲದಿದ್ದರೆ ಸಾಮಾಜಿಕ ಮಾಧ್ಯಮಗಳಲ್ಲಿ ಈಗಾಗಲೇ ಮಾಡಿರುವ ವೀಡಿಯೋವನ್ನು ಹಾಕುವುದಾಗಿ ಬೆದರಿಕೆ ಹಾಕಿ ಬ್ಲ್ಯಾಕ್‌ವೆುàಲ್‌ ಮಾಡಿದ್ದಾನೆ. ಜತೆಗೆ ಯುವತಿಯ ಕಾರನ್ನು ತನ್ನಲ್ಲಿ ಇಟ್ಟುಕೊಂಡಿದ್ದ.

ಮನೆಗೆ ಅಕ್ರಮ ಪ್ರವೇಶ, ನಗದು ಕಳವು
ಈ ನಡುವೆ ಯುವತಿಯ ಮನೆಯವರು ಕಾರನ್ನು ಕೇಳಿದ್ದಾರೆ. ಆತನಿಂದ ಕಾರನ್ನು ಪಡೆದುಕೊಳ್ಳಬೇಕು ಎಂದು ಅ. 25ರಂದು ಆತನ ವಿಳಾಸವನ್ನು ಹುಡುಕಿಕೊಂಡು ದೇರಳಕಟ್ಟೆಯ ಆತ ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ಹೋದಾಗ ಕಾರು ಪಾರ್ಕಿಂಗ್‌ ಸ್ಥಳದಲ್ಲಿ ಕಂಡುಬಂದಿದೆ. ವಾಚ್‌ಮನ್‌ ಬಳಿ ಮನೆಯ ವಿಳಾಸ ಪಡೆದು ಹೋಗಿ ಆತನ ತಾಯಿಯಲ್ಲಿ ಕಾರು ವಾಪಸು ನೀಡುವಂತೆ ವಿನಂತಿಸಿದಾಗ ಅಲ್ಲಿದ್ದ ಶಫಿನ್‌ನ ಅಣ್ಣ ಮೊಹಮ್ಮದ್‌ ಶಿಯಾಬ್‌, ಅತ್ಯಾಚಾರ ಮಾಡಲು ಯತ್ನಿಸಿದ್ದ. ಜತೆಗೆ ಕೊಲೆ ಬೆದರಿಕೆಯನ್ನೂ ಹಾಕಿದ್ದಾನೆ. ಆತನಿಂದ ತಪ್ಪಿಸಿಕೊಂಡು ಯುವತಿ ಮನೆಗೆ ಬಂದಿದ್ದಾಳೆ. ಅ. 27ರಂದು ರಾತ್ರಿ 9 ಗಂಟೆ ವೇಳೆ ಮೊಹಮ್ಮದ್‌ ಶಫೀನ್‌ ಅಕ್ರಮವಾಗಿ ಯುವತಿಯ ಮನೆಗೆ ಪ್ರವೇಶಿಸಿ, ಆಕೆಯ ಬ್ಯಾಗ್‌ನಲ್ಲಿದ್ದ 62 ಸಾವಿರ ರೂ. ಹಣವನ್ನು ಕಳವು ಮಾಡಿಕೊಂಡು ಹೋಗಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಯುವತಿ ದೂರಿನಲ್ಲಿ ಆಗ್ರಹಿಸಿದ್ದಾಳೆ. ಪ್ರಕರಣ ದಾಖಲಿಸಿದ ಬಳಿಕ ಆರೋಪಿ ಶಿಯಾಬ್‌ ಪತ್ನಿಯೂ ಕರೆ ಮಾಡಿ ಬೆದರಿಕೆ ಹಾಕಿದ್ದು, ಆಕೆಯ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಯುವತಿ ಇನ್ನೊಂದು ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next