Advertisement

ಮಂಗಳೂರು: ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಶಂಕೆ

08:56 PM May 11, 2022 | Team Udayavani |

ಮಂಗಳೂರು: ಫಿಸಿಯೋಥೆರಪಿ ವಿದ್ಯಾರ್ಥಿನಿಯೊಬ್ಬಳು ತನ್ನ ಹಾಸ್ಟೆಲ್ ಕೊಠಡಿಯಲ್ಲಿ ಬುಧವಾರ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

Advertisement

ಮೃತಳನ್ನು ಕೇರಳದ ಕಣ್ಣೂರು ನಿವಾಸಿ ಪದ್ಮನಾಭ ಎಂಬವರ ಪುತ್ರಿ ಸಾಂದ್ರಾ ಪಿ ಪಿ (21) ಎಂದು ಗುರುತಿಸಲಾಗಿದೆ. ನಗರದ ಪ್ರಮುಖ ಕಾಲೇಜಿನಲ್ಲಿ 3ನೇ ವರ್ಷದ ಬಿಪಿಟಿ ವಿದ್ಯಾರ್ಥಿನಿಯಾಗಿದ್ದಳು.

ಮೇ 11 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯ ನಡುವೆ ಸಾವು ಸಂಭವಿಸಿರಬಹುದು ಎಂದು ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ಶಂಕಿಸಿದ್ದಾರೆ.

ಮೂಲಗಳ ಪ್ರಕಾರ, ಸಂತ್ರಸ್ತೆ ಕಳೆದ ಒಂದು ವರ್ಷಕ್ಕೂ ಹೆಚ್ಚು ಕಾಲ ಖಿನ್ನತೆಯಿಂದ ಬಳಲುತ್ತಿದ್ದರು. ಸುಮಾರು ಒಂದು ವರ್ಷದ ಹಿಂದೆ ಆಕೆ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next