Advertisement

Mangaluru: ತೀವ್ರ ನಿಗಾ ಘಟಕಕ್ಕೆ ಪ್ರಧಾನಿಯಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಶಿಲಾನ್ಯಾಸ

07:35 PM Oct 29, 2024 | Team Udayavani |

ಮಂಗಳೂರು:  ಪಿಎಂ-ಎಬಿಎಚ್‌ಐಎಂ ( ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇನ್‌ಫ್ರಾಸ್ಟ್ರಕ್ಚರ್ ಮಿಷನ್) ಕಾರ್ಯಕ್ರಮದಡಿ ವೆನ್ಲಾಕ್ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಾಣ ಮಾಡಲು ಉದ್ದೇಶಿಸಿರುವ 50 ಹಾಸಿಗೆಗಳ ತೀವ್ರ ನಿಗಾ ಘಟಕಕ್ಕೆ ಅ.29ರ ಮಂಗಳವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ಶಿಲಾನ್ಯಾಸ ನೆರವೇರಿಸಿದರು.

Advertisement

ಹೊಸದಿಲ್ಲಿಯಲ್ಲಿ ಮಂಗಳವಾರ ಜರುಗಿದ ಆಯುರ್ವೇದ ದಿನ ಮತ್ತು ಧನ್ವಂತರಿ ಜಯಂತಿ ಕಾರ್ಯಕ್ರಮದಲ್ಲಿ 23.75 ಕೋ.ರೂ. ವೆಚ್ಚದ ವೆನ್ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕ ಸಹಿತ ದೇಶದ ವಿವಿಧೆಡೆಯ 12,850 ಕೋ.ರೂ ವೆಚ್ಚದ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸವನ್ನು ನರೇಂದ್ರ ಮೋದಿ ನೆರವೇರಿಸಿದರು.

ಮಂಗಳೂರಿನ ಅತ್ತಾವರದ ಐಎಂಎ ಭವನದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟ ಫಲಕ ಅನಾವರಣಗೊಳಿಸಿದರು. ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜಾ, ಕೆ.ಪ್ರತಾಪ ಸಿಂಹ ನಾಯಕ್, ಮೇಯರ್ ಮನೋಜ್ ಕುಮಾರ್, ಉಪಮೇಯರ್ ಭಾನುಮತಿ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿ.ಪಂ. ಸಿಇಒ ಡಾ| ಆನಂದ್ ಕೆ. ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next