Mangaluru: ಜೈಲಾಧಿಕಾರಿಗಳ ಕರ್ತವ್ಯಕ್ಕೆ ಕೈದಿಗಳಿಂದ ಅಡ್ಡಿ; ಹಲ್ಲೆಗೆ ಯತ್ನ
Team Udayavani, Jan 14, 2025, 9:04 PM IST
ಮಂಗಳೂರು: ಮಂಗಳೂರಿನ ಜಿಲ್ಲಾ ಕಾರಾಗೃಹದ ‘ಎ’ ಬ್ಲಾಕ್‌ನಲ್ಲಿ ಸಿಬ್ಬಂದಿಗಳ ಕರ್ತವ್ಯಕ್ಕೆ ಕೈದಿಗಳು ಅಡ್ಡಿ ಮಾಡಿದ ಘಟನೆ ಸೋಮವಾರ (ಜ.13) ರಾತ್ರಿ ನಡೆದಿದೆ.
ಜೈಲಿನ ಸೆಲ್‌ಗಳಲ್ಲಿ ನಿಷೇಧಿತ ವಸ್ತುಗಳಿರುವ ಶಂಕೆಯ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಸಿಬ್ಬಂದಿ ತಪಾಸಣೆಗೆ ತೆರಳಿದ್ದರು. ಈ ವೇಳೆ ವಿಚಾರಣಾಧೀನ ಕೈದಿಗಳು ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂದು ವರದಿಯಾಗಿದೆ.
ಜೈಲಿನಲ್ಲಿ ಮೊಬೈಲ್, ಗಾಂಜಾ ಮೊದಲಾದ ನಿಷೇಧಿತ ವಸ್ತುಗಳಿರು ಶಂಕೆಯಿಂದ ಜೈಲು ಅಧೀಕ್ಷಕ ಎಂ.ಎಚ್.ಆಶೇಖಾನ್ ನೇತೃತ್ವದಲ್ಲಿ ತಪಾಸಣೆಗೆ ಮುಂದಾಗಿದ್ದರು. ಆಗ ಪಾತ್ರೆ ಮತ್ತಿತರ ವಸ್ತುಗಳಿಂದ ವಿಚಾರಣಾ ಕೈದಿಗಳು ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲದೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಒಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಡ ವಿದ್ಯಾರ್ಥಿಗಳ ಇಂಜಿನಿಯರಿಂಗ್ ಕನಸು ನನಸು ಮಾಡಿದ ಹುಲಕೋಟಿಯ ಆರ್.ಇ.ಸಿ
Mangaluru: ಹ್ಯಾಮಿಲ್ಟನ್ ವೃತ್ತ; ತೂಗುಯ್ಯಾಲೆಯಲ್ಲಿ ಹೈಲ್ಯಾಂಡ್ !
On Camera: ಉತ್ತರಾಖಂಡ್- ಕಚೇರಿ ಮೇಲೆ ಗುಂಡಿನ ದಾಳಿ- ಹಾಲಿ, ಮಾಜಿ ಶಾಸಕರ ಬಂಧನ
Udupi: ಪ್ರತಿಷ್ಠಿತ ವಸತಿ ಶಾಲೆಗೆ ಬಾಂಬ್ ಬೆದರಿಕೆ; ಪೊಲೀಸ್ ಪರಿಶೀಲನೆ
MUDA Case: ಸಿಎಂ ಸಿದ್ದರಾಮಯ್ಯ ಪತ್ನಿ, ಸಚಿವ ಬೈರತಿಗೆ ಇಡಿ ನೋಟಿಸ್