Advertisement

Amrit Someshwar ಹಿರಿಯ ಮೇಧಾವಿ ಸಾಹಿತಿಯನ್ನು ಕಳೆದುಕೊಂಡಿದ್ದೇವೆ: ಡಾ| ಹೆಗ್ಗಡೆ

12:47 AM Jan 07, 2024 | Team Udayavani |

ಬೆಳ್ತಂಗಡಿ: ಕನ್ನಡ, ತುಳು ಸಾರಸ್ವತ ಲೋಕದ ಖ್ಯಾತ ಸಾಹಿತಿಯಾಗಿ, ಸಂಶೋಧಕರಾಗಿ, ಯಕ್ಷಗಾನ ಪ್ರಸಂಗಕರ್ತರಾಗಿ ಪ್ರಸಿದ್ಧರಾಗಿದ್ದ ಡಾ| ಅಮೃತ ಸೋಮೇಶ್ವರವರು ಮೃದು ಸ್ವಭಾವಿ, ಸಹೃದಯಿಯಾಗಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಯಕ್ಷಗಾನ ಮೇಳಕ್ಕೆ ಪುರಾಣ, ಐತಿಹಾಸಿಕ ಸೇರಿದಂತೆ 11 ಪ್ರಸಂಗಗಳನ್ನು ಬರೆದುಕೊಟ್ಟಿದ್ದರು. ಅವರನ್ನು ಕಳೆದುಕೊಂಡದ್ದು ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ.

Advertisement

ಶ್ರೀ ಕ್ಷೇತ್ರ ಧರ್ಮಸ್ಥಳದ ಅಭಿಮಾನಿಗಳಾಗಿದ್ದು ನಿರಂತರ ಸಂಪರ್ಕದಲ್ಲಿದ್ದವರು. ಅವರ ಆತ್ಮಕ್ಕೆ ಚಿರಶಾಂತಿ ದೊರಕುವಂತೆ ಶ್ರೀ ಮಂಜುನಾಥ ಸ್ವಾಮಿ ಅನುಗ್ರಹಿಸಲೆಂದು ಪ್ರಾರ್ಥಿಸುತ್ತೇನೆ ಎಂದು ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದ್ದಾರೆ.

ಗಣ್ಯರ ಸಂತಾಪ
ಹಿರಿಯ ವಿದ್ವಾಂಸ ಅಮೃತ ಸೋಮೇಶ್ವರ ಅವರು ಉತ್ತಮ ನಡೆನುಡಿಯ ಹಿರಿಯಚೇತನರಾಗಿದ್ದು, ಅವರ ಅಗಲಿಕೆ ದೊಡ್ಡ ನಷ್ಟ ಎಂದು ಮೂಡುಬಿದಿರೆಯ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ, ಆನೆಗುಂದಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ, ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌, ಸಂಸದ ನಳಿನ್‌ ಕುಮಾರ್‌ ಕಟೀಲು, ಸ್ಪೀಕರ್‌ ಯು.ಟಿ. ಖಾದರ್‌, ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ, ಮಾಜಿ ಸಚಿವ ವಿನಯ್‌ ಕುಮಾರ್‌ಸೊರಕೆ, ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್‌. ಮೆಂಡನ್‌, ಮಾಜಿ ಶಾಸಕ ಕೆ. ಜಯ ರಾಮ ಶೆಟ್ಟಿ, ಹಿರಿಯ ವಿದ್ವಾಂಸರಾದ ಡಾ| ಪ್ರಭಾಕರ ಎಂ.ಜೋಶಿ, ಪ್ರೊ| ಎ.ವಿ.ನಾವಡ, ಪ್ರೊ| ಬಿ.ಎ.ವಿವೇಕ ರೈ, ಡಾ| ಚಿನ್ನಪ್ಪ ಗೌಡ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next